ಉಗ್ರರ ಜೊತೆಗಿನ ಗುಂಡಿನ ಕಾಳಗದಲ್ಲಿ ಪಾಕ್‌ ಸೇನೆಯ ಮೂವರು ಯೋಧರು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಪಾಕಿಸ್ತಾನದ ವಾಯುವ್ಯ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಸೈನಿಕರು ಮತ್ತು ಇಬ್ಬರು ಭಯೋತ್ಪಾದಕರು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ ಎಂದು ಪಾಕ್ ಸೇನಾ ಹೇಳಿಕೆ ತಿಳಿಸಿದೆ.
ಕುರ್ರಂ ಬುಡಕಟ್ಟು ಜಿಲ್ಲೆಯಲ್ಲಿ ತೀವ್ರವಾದ ಗುಂಡಿನ ಕಾಳಗ ನಡೆದಿದ್ದು, ಸೇನಾ ಪಡೆಗಳು ಹತರಾದ ಭಯೋತ್ಪಾದಕರಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿವೆ ಎಂದು ಮಿಲಿಟರಿಯ ಮಾಧ್ಯಮ ವಿಭಾಗ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ಹೇಳಿಕೆಯಲ್ಲಿ ತಿಳಿಸಿದೆ.
“ಪಾಕಿಸ್ತಾನದ ಸೇನೆಯು ಭಯೋತ್ಪಾದನೆಯ ಬೆದರಿಕೆಯನ್ನು ತೊಡೆದುಹಾಕಲು ನಿರ್ಧರಿಸಿದೆ ಮತ್ತು ನಮ್ಮ ವೀರ ಸೈನಿಕರ ಇಂತಹ ತ್ಯಾಗಗಳು ನಮ್ಮ ಸಂಕಲ್ಪವನ್ನು ಮತ್ತಷ್ಟು ಬಲಪಡಿಸುತ್ತವೆ” ಎಂದು ಸೇನೆಯ ಹೇಳಿಕೆ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!