ಹುಬ್ಬಳ್ಳಿ ಅಗ್ನಿ ಅವಘಡದಲ್ಲಿ ಮೃತ ಪಟ್ಟವರಿಗೆ ಐದು ಲಕ್ಷ ಪರಿಹಾರ: ಹಾಲಪ್ಪ ಆಚಾರ್‌

ಹೊಸದಿಗಂತ ವರದಿ ಹುಬ್ಬಳ್ಳಿ:
ನಗರದ ಹೊರವಲಯದ ತಾರಿಹಾಳದ ಕೈಗಾರಿಕಾ ಪ್ರದೇಶದ ಕಾರ್ಖಾನೆಯ ಅಗ್ನಿ ಅವಘಡದಲ್ಲಿ ಮೃತಪಟ್ಟ ಕುಟುಂಬಕ್ಕೆ ಐದು ಲಕ್ಷ ರೂ. ಪರಿಹಾರ ನೀಡಲಾಗುತ್ತದೆ ಎಂದು ಜಿಲ್ಲಾಸ್ತುವಾರಿ ಸಚಿವ ಹಾಲಪ್ಪ ಆಚಾರ್ ತಿಳಿಸಿದರು.

ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡದಲ್ಲಾದ ಗಾಯಾಳುಗಳ ಆರೋಗ್ಯ ವಿಚಾರಿಸಿ, ಅವರ ಕುಟುಂಬದವರಿಗೆ ಸಾಂತ್ವನ ನೀಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ಇದುವರೆಗೂ ಯಾರನ್ನು ಬಂಧಿಸಿಲ್ಲ. ಇಬ್ಬರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ಒಳಪಡಿಸಲಾಗಿದೆ ಎಂದರು.‌

ಅಗ್ನಿ ಅನಾಹುತಕ್ಕೆ ಕಾರಣವಾಗಿರುವ ಕಾರ್ಖಾನೆಯು ಪರವಣಿಗೆ ಪಡೆದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾರ್ಖಾನೆ ಮಾಲೀಕನನ್ನು ಶೋಧದಲ್ಲಿ ಪೊಲೀಸರು ತೊಡಗಿದ್ದಾರೆ. ಅವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿ ಸೂಕ್ತ ಕ್ರಮ ತೆಗೆದುಕೊಳ್ಳು ಪೊಲೀಸ್ ಅಧಿಕಾರಿಗಳಿಗೆ ತಿಳಿಸಲಾಗಿದೆ. ಕಾನೂನು ಬಾಹಿರವಾಗಿ ಕೈಗಾರಿಕಾ ನಡೆಸುವವರ ವಿರುದ್ದ ಕ್ರಮಕೈಗೊಳ್ಳಲಾಗುವುದು. ದುರಂತ ಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಸೇರಿದಂತೆ ಶಾಮೀಲಾದವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸುತ್ತೇವೆ ಎಂದರು.

ಕಾರ್ಖಾನೆ ಎಂದ ಮೇಲೆ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು. ಆದರೆ, ಇಲ್ಲಿ ಯಾವುದೆ ಮುಂಜಾಗ್ರತೆಯ ಕೈಗೊಂಡಿಲ್ಲ ಎನ್ನುವುದು ಮೇಲ್ನೋಟಕ್ಕೆ ಕಾಣುತ್ತದೆ. ಇದರಿಂದ ಮೂವರು ಜೀವ ಕಳೆದುಕೊಳ್ಳುವಂತಾಯಿತು. ಇದು ಸಾಮಾನ್ಯವಲ್ಲ. ಹೋದ ಜೀವ ಮತ್ತೆ ಬರದು. ಕಾರ್ಖಾನೆಯಲ್ಲಿ ಒಟ್ಟು 14 ಜನ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ನಿನ್ನೆ ಘಟನೆಯಲ್ಲಿ 8 ಜನರಿದ್ದರು ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!