ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳದ ವಯನಾಡ್ ದುರಂತದಲ್ಲಿ ಮಡಿದ ಕನ್ನಡಿಗರಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ.
ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ ಈ ವಿಷಯ ಪ್ರಕಟಿಸಿದ್ದಾರೆ. ಇದೇ ವೇಳೆ ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.
ರಾಜ್ಯದ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳು, ಎನ್‌ಡಿಆರ್‌ಎಫ್ ತಂಡ ಮತ್ತು ಸೇನಾ ತಂಡಗಳು ಈಗಾಗಲೇ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ರಕ್ಷಣಾ ಕಾರ್ಯಗಳ ಉಸ್ತುವಾರಿ ವಹಿಸಿಕೊಳ್ಳಲು ಸಚಿವ ಸಂತೋಷ್ ಲಾಡ್ ಅವರನ್ನು ಇಂದು ವಯನಾಡಿಗೆ ಕಳುಹಿಸಲಾಗಿದೆ ಎಂದರು.