Tuesday, July 5, 2022

Latest Posts

ಕೊರೋನಾ ಸೋಂಕಿನಿಂದ ಮೃತಪಟ್ಟ ಕುಟುಂಬಕ್ಕೆ ಐದು ಲಕ್ಷ ರೂ ಪರಿಹಾರ ನೀಡಿ: ಸಿದ್ದು ಆಗ್ರಹ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಕೊರೋನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಬಿಪಿಎಲ್ ಕುಟುಂಬಕ್ಕೆ ಸಿಎಂ ಯಡಿಯೂರಪ್ಪ ಅವರು ಒಂದು ಲಕ್ಷ ಪರಿಹಾರ ಘೋಷಿಸಿದ್ದು, ಒಂದು ಲಕ್ಷ ಅಲ್ಲ, ಐದು ಲಕ್ಷ ಕೊಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಒಂದು ಲಕ್ಷ ಅಲ್ಲ, ಐದು ಲಕ್ಷಕ್ಕೆ ಪರಿಹಾರ ಮೊತ್ತವನ್ನು ಹೆಚ್ಚಿಸಬೇಕು ಎಂದಿದ್ದಾರೆ. ಕೊರೋನಾ ಸೋಂಕನ್ನು ಇದಾಗಲೇ ರಾಷ್ಟ್ರೀಯ ವಿಪತ್ತು ಎಂದು ಪರಿಗಣಿಸಲಾಗಿದೆ. ಆದ್ದರಿಂದ ವಿಪತ್ತು ಪರಿಹಾರದ ನಿಯಮ ಅನ್ವಯ ಐದು ಲಕ್ಷ ನೀಡುವ ಸಾಧ್ಯತೆ ಇದೆ. ಆದ್ದರಿಂದ ಇದರ ಬಗ್ಗೆ ಕೇಂದ್ರದಲ್ಲಿ ಮಾತನಾಡಿ, ಶೀಘ್ರವೇ ಪರಿಹಾರ ಮೊತ್ತ ಹೆಚ್ಚಳ ಮಾಡಬೇಕು ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss