Wednesday, August 10, 2022

Latest Posts

5 ಲಕ್ಷ ರೂ. ಮೌಲ್ಯದ ಶ್ರೀಗಂಧದ ತುಂಡುಗಳ ಅಕ್ರಮ ಸಾಗಾಟ: ಇಬ್ಬರ ಬಂಧನ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ವರದಿ, ದಾವಣಗೆರೆ:

ಜಿಲ್ಲೆಯ ಚನ್ನಗಿರಿ ತಾಲೂಕು ಗುರುರಾಜಪುರ ಗ್ರಾಮದ ಬಸ್ ನಿಲ್ದಾಣ ಬಳಿ ಅಕ್ರಮವಾಗಿ ಸಾಗಿಸುತ್ತಿದ್ದ 5 ಲಕ್ಷ ರೂ. ಮೌಲ್ಯದ ಶ್ರೀಗಂಧದ ತುಂಡುಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಚನ್ನಗಿರಿ ತಾಲೂಕು ಕೆಂಪಯ್ಯನ ತೊಕ್ಕಲು ಗ್ರಾಮದ ನಿವಾಸಿ ಮುನಿಯಪ್ಪ ಹಾಗೂ ರಾಧಾಕೃಷ್ಣ ಎಂಬುವರನ್ನು ಬಂಧಿಸಲಾಗಿದೆ. ಇಬ್ಬರೂ ಶಿವಮೊಗ್ಗ-ಚಿತ್ರದುರ್ಗ ಮಾರ್ಗದಲ್ಲಿ 58 ಕೆಜಿ ತೂಕದ ಶ್ರೀಗಂಧದ ತುಂಡುಗಳನ್ನು ಅಕ್ರಮವಾಗಿ ಬೈಕ್‌ನಲ್ಲಿ ಸಾಗಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಇಲಾಖೆ ಸಿಬ್ಬಂದಿ ಆರೋಪಿಗಳನ್ನು ಮಾಲು ಸಮೇತ ವಶಕ್ಕೆ ಪಡೆದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss