ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ನಗರದ ದಕ್ಷಿಣ ವಿಭಾಗ ಅಬಕಾರಿ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ 500,000 ರೂ. 144 ಬಾಟಲಿ ಗೋವಾ ಮದ್ಯ ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಯನ್ನು ಕತ್ರಿಗುಪ್ಪೆ ನಿವಾಸಿ ಪುರುಷೋತ್ತಮ್ ಎಂದು ಗುರುತಿಸಲಾಗಿದೆ.
ಆರೋಪಿ ಗೋವಾದಿಂದ ಅಗ್ಗದ ದರದಲ್ಲಿ ಮದ್ಯ ತರಿಸಿಕೊಳ್ಳುತ್ತಿದ್ದ. ಗೋವಾದಲ್ಲಿರುವ ಅಂಗಡಿಯವರ ಸಂಪರ್ಕದ ಮೇರೆಗೆ ಬೆಂಗಳೂರಿಗೆ ಮದ್ಯ ತರಿಸಿಕೊಳ್ಳುತ್ತಿದ್ದ. ತನಗೆ ಬೇಕಾದಾಗಲೆಲ್ಲಾ ಬಸ್‌ನಲ್ಲಿ ಮದ್ಯದ ಬಾಟಲ್ ಇಡುವಂತೆ ಹೇಳುತ್ತಿದ್ದ. ಬಳಿಕ ಇಲ್ಲಿಗೆ ಬರುತ್ತಿದ್ದಂತೆ ಇಳಿಸಿಕೊಳ್ಳುತ್ತಿದ್ದ. ನಂತರ ಮನೆಗೆ ತೆಗೆದುಕೊಂಡು ಹೋಗಿ ಸ್ಟಾಕ್ ಮಾಡಿ, ಇದನ್ನು ಕಡಿಮೆ ಬೆಲೆಗೆ ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.
ಪ್ರಸ್ತುತ, ಆರೋಪಿಯನ್ನು ಅಬಕಾರಿ ಕಾಯ್ದೆ, 1965 ರ ಸೆಕ್ಷನ್ 11, 14, 15, 38 ಎ ಮತ್ತು 43 ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.