ಶಾಲೆ ಮಟ್ಟದಲ್ಲಿ ಕ್ರೀಡೆ ಉತ್ತೇಜಿಸಲು 5 ಲಕ್ಷ ರೂ. ಅನುದಾನ: ನಾರಾಯಣ ಗೌಡ

ಹೊಸದಿಗಂತ ವರದಿ, ಶಿವಮೊಗ್ಗ:

ರಾಜ್ಯದಲ್ಲಿ ಶಾಲಾಮಟ್ಟದಲ್ಲಿ ಕ್ರೀಡೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ  ಗ್ರಾಮಮಟ್ಟದಲ್ಲಿ ಸಂಸ್ಥೆಯನ್ನು ಸ್ಥಾಪಿಸುವ ಮೂಲಕ  ತಲಾ 5 ಲಕ್ಷ ರೂ. ಅನುದಾನ ನೀಡಲು ಉದ್ದೇಶಿಸಲಾಗದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ಕೆ.ಸಿ. ನಾರಾಯಣ ಗೌಡ ತಿಳಿಸಿದರು.
ಸಾಗರ ದ   ಗೋಪಾಲಗೌಡ ಕ್ರೀಡಾಂಗಣದ ಪಕ್ಕದಲ್ಲಿ ಯುವ ಸಬಲೀಕರಣ ಇಲಾಖೆಯಿಂದ ನಿರ್ಮಿಸಲಾಗಿರುವ ಒಳಾಂಗಣ ಕ್ರೀಡಾಂಗಣವನ್ನು ಮಂಗಳವಾರ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
ಮಕ್ಕಳಿಗೆ ವಿದ್ಯಾಭ್ಯಾಸದ ಜೊತೆಗೆ ಕ್ರೀಡೆಯೂ ಅಗತ್ಯ. ಮಕ್ಕಳು ಎಲ್ಲೆಂದರಲ್ಲಿ ಕ್ರೀಡೆಯಲ್ಲಿ ತೊಡಗಿಕೊಳ್ಳಲು ಬರುವುದಿಲ್ಲ. ಈ ಹಿನ್ನೆಲೆಯಲ್ಲಿ ಪ್ರತಿ ಗ್ರಾಮದಲ್ಲೂ ಕ್ರೀಡಾಂಗಣ ನಿರ್ಮಿಸಲು 500 ಕೋಟಿ ರೂ.ಗೂ ಹೆಚ್ಚಿನ ಅನುದಾನ ಬಿಡುಗಡೆ ಮಾಡಲಾಗಿದೆ. ತಾಲೂಕು ಮಟ್ಟದಲ್ಲಿ ಕ್ರೀಡೆಯನ್ನು ಪ್ರೋತ್ಸಾಹಿಸಲು ಹದಿನೈದು ದಿನದ ಹಿಂದೆ 176 ಕ್ರೀಡಾ ತರಬೇತುದಾರರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶಾಸಕ ಎಚ್. ಹಾಲಪ್ಪ ಮಾತನಾಡಿದರು.
ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್, ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್, ಉಪಾಧ್ಯಕ್ಷ ವಿ. ಮಹೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಅರವಿಂದ ರಾಯ್ಕರ್, ಸದಸ್ಯ ತುಕಾರಾಂ, ಜಿಲ್ಲಾಕಾರಿ ಡಾ. ಆರ್. ಸೆಲ್ವಮಣಿ, ಉಪವಿಭಾಗಾಕಾರಿ ಪಲ್ಲವಿ ಸಾತೇನಹಳ್ಳಿ, ತಹಶೀಲ್ದಾರ್ ಮಲ್ಲೇಶ್ ಬಿ. ಪೂಜಾರ್, ಪೌರಾಯುಕ್ತ ರಾಜು ಡಿ. ಬಣಕಾರ್, ಕ್ರೆಡಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ ಸ್ವಾಮಿ, ಪ್ರಕಾಶ್ ಎನ್.ಡಿ. ಇನ್ನಿತರರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!