ಉತ್ತರ ಪ್ರದೇಶದಲ್ಲಿ ಬೆಂಕಿ ಅವಘಢ: ಒಂದೇ ಕುಟುಂಬದ ಐವರು ಸಜೀವ ದಹನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಉತ್ತರ ಪ್ರದೇಶದ ಮೌವಿನ ಶಹಪುರ್ ಗ್ರಾಮದ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಐವರು ಸಜೀವ ದಹನವಾಗಿರುವ ಘಟನೆ ನಡೆದಿದೆ. ಮಾಹಿತಿ ಲಭಿಸಿದ ಕೂಡಲೇ ಪರಿಹಾರ ತಂಡಗಳು ಸ್ಥಳಕ್ಕೆ ಧಾವಿಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ

ಜಿಲ್ಲಾ ಮ್ಯಾಜಿಸ್ಟ್ರೇಟ್ ಅರುಣ್ ಕುಮಾರ್ ಮಾತನಾಡಿ, ಮೌ ಜಿಲ್ಲೆಯ ಶಹಪುರ್ ಗ್ರಾಮದ ಮನೆಗೆ ಬೆಂಕಿ ಬಿದ್ದು ಓರ್ವ ಮಹಿಳೆ, ಯುವಕ, ಮೂವರು ಅಪ್ರಾಪ್ತರು ಸೇರಿದಂತೆ ಒಂದೇ ಕುಟುಂಬದ 5 ಸದಸ್ಯರು ಸಾವನ್ನಪ್ಪಿದ್ದಾರೆ. ಅಗ್ನಿಶಾಮಕ ದಳ, ವೈದ್ಯಕೀಯ ಸಿಬ್ಬಂದಿಯೊಂದಿಗೆ ಪೊಲೀಸರು ಮತ್ತು ಪರಿಹಾರ ತಂಡಗಳು ಸ್ಥಳಕ್ಕೆ ತಲುಪಿವೆ.

“ಪ್ರಾಥಮಿಕ ವರದಿಯು ಒಲೆಯಿಂದ ಬೆಂಕಿ ಹೊತ್ತಿಕೊಂಡಿದೆ” ಎನ್ನಲಾಗಿದೆ. ಪ್ರತಿ ವ್ಯಕ್ತಿಗೆ 4 ಲಕ್ಷ ರೂಪಾಯಿ ನೆರವು ನೀಡುವುದಾಗಿಯೂ ಘೋಷಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!