5 ಸಾವಿರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ, ಗರಿಷ್ಠ ವಯೋಮಿತಿ ಹೆಚ್ಚಳ: ಗೃಹ ಸಚಿವ ಆರಗ ಜ್ಞಾನೇಂದ್ರ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಸರ್ಕಾರದಿಂದ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವಂತ 5075 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಆಕಾಂಕ್ಷೆಯಲ್ಲಿದ್ದಂತ ಅಭ್ಯರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನಿಗದಿ ಪಡಿಸಲಾಗಿದ್ದಂತ ಗರಿಷ್ಠ ವಯೋಮಿತಿ ಹೆಚ್ಚಿಸಿದಲ್ಲದೇ ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ ಮಾಡಲಾಗಿದೆ ಎಂದು

ಈ ಬಗ್ಗೆ ಟ್ವಿಟ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಉದ್ಯೋಗಾಕಾಂಕ್ಷಿಗಳ ಬಹು ದಿನಗಳ ಬೇಡಿಕೆಯಾಗಿದ್ದ, ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ನಿಗದಿಪಡಿಸಲಾದ ವಯೋಮಿತಿಯನ್ನು ಒಂದು ಬಾರಿಗೆ ಅನ್ವಯವಾಗುವಂತೆ ಹೆಚ್ಚಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಇದರಿಂದ ಸಾವಿರಾರು ಅಭ್ಯರ್ಥಿಗಳಿಗೆ ಅನುಕೂಲ ಆಗಲಿದೆ.

ರಾಜ್ಯ ಸರ್ಕಾರದಿಂದ ಪೊಲೀಸ್ ಕಾನ್ಸ್ ಟೇಬಲ್ (ಸಿವಿಲ್) ಮತ್ತು ಪೊಲೀಸ್ ಕಾನ್ಸ್ ಟೇಬಲ್ (ಸಿಎಆರ್ ಮತ್ತು ಡಿಎಆರ್) ಹುದ್ದೆಗಳಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಗೆ ಮಾತ್ರ ಎರಡು ವರ್ಷಗಳಿಗೆ ಹೆಚ್ಚಿಸಿ ಆದೇಶಿಸಿದೆ. ಈ ಮೂಲಕ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಯ ಆಕಾಂಕ್ಷಿಗಳಿಗೆ ಸಿಹಿಸುದ್ದಿಯನ್ನು ಸರ್ಕಾರ ನೀಡಿದೆ.

ಈ ಸಂಬಂಧ ಒಳಾಡಳಿತ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ನಡವಳಿ ಹೊರಡಿಸಿದ್ದು, ಪೊಲೀಸ್ ಕಾನ್ಸ್ ಟೇಬಲ್ (ಸಿವಿಲ್) ಹುದ್ದೆ ಮತ್ತು ಪೊಲೀಸ್ ಕಾನ್ಸ್ ಟೇಬಲ್ (ಸಿಎಆರ್ ಮತ್ತು ಡಿಎಆರ್) ಹುದ್ದೆಗಳಿಗೆ ನಿಗಧಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಗೆ ಮಾತ್ರ 2022-23ನೇ ಸಾಲಿನಲ್ಲಿ ನೇಮಕಾತಿಗೆ ಕರೆದಿರುವ ಪೊಲೀಸ್ ಕಾನ್ಸ್ ಟೇಬಲ್ ( ಸಿಎಆರ್ ಮತ್ತು ಡಿಎಆರ್) 420+3064 ಸೇರಿ ಒಟ್ಟು 3484 ಹುದ್ದೆಗಳಿಗೆ ಮತ್ತು ಪೊಲೀಸ್ ಕಾನ್ಸ್ ಟೇಬಲ್ ( ಸಿವಿಲ್ ) 1137+454 ಸೇರಿದಂತೆ 1591 ಹುದ್ದೆಗಳಿಗೆ ಮಾತ್ರ ಗರಿಷ್ಠ ವಯೋಮಿತಿಯನ್ನು ಎರಡು ವರ್ಷಗಳಿಗೆ ಹೆಚ್ಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!