ಹೊಸದಿಗಂತ ಹುಬ್ಬಳ್ಳಿ:
ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕತ್ತು ಹಿಚುಕಿ ಕೊಲೆ ಮಾಡಿದ ಹ್ಯೇಯ ಕೃತ್ಯ ಅಶೋಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ವಿಜಯನಗರದಲ್ಲಿ ಬೆಳಗ್ಗೆ ನಡೆದಿದೆ.
ಬಾಲಕಿ ಮನೆ ಮುಂದೆ ಆಟವಾಡುತ್ತಿದ್ದಾಗ ಅಪರಿಚಿತ ವ್ಯಕ್ತಿ ಬಂದು ಮಗುವನ್ನು ಎತ್ತಿಕೊಂಡು ಹೋಗಿ ನಿರ್ಮಾಣ ಹಂತದ ಕಟ್ಟಡದಲ್ಲಿ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿ ಕತ್ತು ಹಿಚುಕಿ ಕೊಲೆ ಮಾಡಿ ಪರಾರಿಯಾಗಿದ್ದಾನೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ಅಶೋಕ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಮಗುವಿನ ಶವವನ್ನು ಹುಬ್ಬಳ್ಳಿಯ ಕೆಎಂಸಿಆರ್ ಐ ಆಸ್ಪತ್ರೆಯ ಶವಾಗರಕ್ಕೆ ರವಾನೆ ಮಾಡಿದ್ದಾರೆ. ಆಸ್ಪತ್ರೆಗೆ ಡಿಸಿಪಿ ರವೀಶ್, ಎಸಿಪಿ ರವೀಶ್ ಭೇಟಿ ನೀಡಿ ಶವ ಪರಿಶೀಲನೆ ಮಾಡಿದ್ದಾರೆ.
ಬಾಲಕಿ ಕೊಲೆ ಮಾಡಿದ ಹಿನ್ನೆಲೆ ಆರೋಪಿಯನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿ ಅಶೋಕ ನಗರದ ಪೊಲೀಸ್ ಠಾಣೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ. ಆರೋಪಿ ನಮಗೆ ಒಪ್ಪಿಸಿ, ಇಲ್ಲ ಎನ್ ಕೌಂಟರ್ ಮಾಡಬೇಕು ಎಂದು ಆಗ್ರಹಿಸಿದರು. ಅಶೋಕ ನಗರ ಪೊಲೀಸ್ ಠಾಣೆ ಎದುರು ಬಿಗುವಿನ ವಾತಾವರಣ ಸೃಷ್ಟಿಯಾಗಿದೆ.