ಕುಕ್ಕರ್ ಬಾಂಬ್ ಸ್ಪೋಟ: ಸಂತ್ರಸ್ತ ಆಟೋ ಚಾಲಕಗೆ ಗೃಹ ಸಚಿವರಿಂದ 50ಸಾವಿರ ರೂ. ನೆರವು

ಹೊಸದಿಗಂತ ವರದಿ ಮಂಗಳೂರು:

ನಗರದ ನಾಗೋರಿಯಲ್ಲಿ ಇತ್ತೀಚೆಗೆ ಆಟೋ ರಿಕ್ಷಾದಲ್ಲಿ ಕುಕ್ಕರ್‌ಬಾಂಬ್ ಸ್ಫೋಟಗೊಂಡ ಸ್ಥಳಕ್ಕೆ ಗೃಹ ಸಚಿವರಾದ ಆರಗ‌ ಜ್ಞಾನೇಂದ್ರ ಅವರು‌ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಳಿಕ ಆಸ್ಪತ್ರೆಗೆ ತೆರಳಿದ ಸಚಿವರು ಬಾಂಬ್ ಸ್ಫೋಟದಲ್ಲಿ ಗಾಯಗೊಂಡಿರುವ ಆಟೋ ಚಾಲಕ ಪುರುಷೋತ್ತಮ ಪೂಜಾರಿ ಅವರ ಯೋಗಕ್ಷೇಮ ವಿಚಾರಿಸಿದರು. ಇದೇ ಸಂದರ್ಭ ಅವರು ಪುರುಷೋತ್ತಮ ಅವರ ಕುಟುಂಬಕ್ಕೆ ವೈಯಕ್ತಿಕ ನೆಲೆಯಲ್ಲಿ ರೂ. 50 ಸಾವಿರ ನೆರವು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಡಿಜಿಪಿ ಪ್ರವೀಣ್ ಸೂದ್, ಐಜಿಪಿ ಚಂದ್ರಗುಪ್ತ, ನಗರ ಪೊಲೀಸ್ ಆಯುಕ್ತ ಶಶಿ ಕುಮಾರ್, ಡಿಸಿಪಿ ಅನ್ಶು ಕುಮಾರ್ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!