Saturday, October 1, 2022

Latest Posts

ಗುಲಾಂ ನಬಿ ಆಜಾದ್ ಬೆಂಬಲಿಸಿ 50 ಕಾಂಗ್ರೆಸ್ ನಾಯಕರ ರಾಜೀನಾಮೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಐದು ದಶಕಗಳ ಕಾಲ ಕಾಂಗ್ರೆಸ್ ಪಕ್ಷದೊಂದಿಗಿನ ಒಡನಾಟಕ್ಕೆ ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಕಳೆದ ವಾರ ಅಂತ್ಯ ಹಾಡಿದರು. ಇದೇ ವೇಳೆ ಗುಲಾಂ ನಬಿ ಆಜಾದ್ ಅವರನ್ನು ಬೆಂಬಲಿಸಿ, ಜಮ್ಮು ಮತ್ತು ಕಾಶ್ಮೀರದ ಮಾಜಿ ಉಪ ಮುಖ್ಯಮಂತ್ರಿ ತಾರಾ ಚಂದ್ ಸೇರಿದಂತೆ 50 ಕ್ಕೂ ಹೆಚ್ಚು ಹಿರಿಯ ಕಾಂಗ್ರೆಸ್ ನಾಯಕರು ಮಂಗಳವಾರ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಚಂದ್ ಜೊತೆಗೆ ಮಾಜಿ ಸಚಿವರಾದ ಅಬ್ದುಲ್ ಮಜೀದ್ ವಾನಿ, ಮನೋಹರ್ ಲಾಲ್ ಶರ್ಮಾ, ಘರು ರಾಮ್, ಮಾಜಿ ಶಾಸಕ ಬಲ್ವಾನ್ ಸಿಂಗ್ ಮತ್ತು ಪಕ್ಷದ ಹಲವಾರು ಪ್ರಾಥಮಿಕ ಸದಸ್ಯರು. ಪತ್ರಿಕಾಗೋಷ್ಠಿಯಲ್ಲಿ ಪಕ್ಷಕ್ಕೆ ರಾಜೀನಾಮೆ ನೀಡಿರುವುದಾಗಿ ಘೋಷಿಸಿದರು. ಆಜಾದ್ ಅವರನ್ನು ಬೆಂಬಲಿಸಿ ನಾವು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಜಂಟಿ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದೇವೆ ಎಂದು ಬಲ್ವಾನ್ ಸಿಂಗ್ ಹೇಳಿದ್ದಾರೆ ಸುದ್ದಿ ಸಂಸ್ಥೆಗಳಿಗೆ ಮಾಹಿತಿ ನೀಡಿದ್ರು.

ಗುಲಾಂ ನಬಿ ಆಜಾದ್ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ, ಆದಷ್ಟು ಬೇಗ ಜಮ್ಮು-ಕಾಶ್ಮೀರದಲ್ಲಿ ಸ್ವಂತ ಪಕ್ಷವನ್ನು ಆರಂಭಿಸಲಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಆಜಾದ್ ಅವರ ಅನೇಕ ಬೆಂಬಲಿಗರು ಈಗಾಗಲೇ ಹೊಸ ಪಕ್ಷ ಶೀಘ್ರದಲ್ಲೇ ಬರಲಿದೆ ಎಂದು ಹೇಳಿಕೊಂಡಿದ್ದಾರೆ. ಇದೇ ವೇಳೆ, ಜಮ್ಮು-ಕಾಶ್ಮೀರದಲ್ಲಿ ಈಗಾಗಲೇ ಹಲವು ಕಾರ್ಪೊರೇಟರ್‌ಗಳು, ಜಿಲ್ಲಾ ಮತ್ತು ಬ್ಲಾಕ್ ಮಟ್ಟದ ನಾಯಕರು ಕಾಂಗ್ರೆಸ್ ತೊರೆದು ಆಜಾದ್‌ಗೆ ಬೆಂಬಲ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!