ಹೊಸದಿಗಂತ ಡಿಜಿಟಲ್ ಡೆಸ್ಕ್:
ಸರ್ಕಾರಿ ಪ್ರೌಢಶಾಲೆಗಳನ್ನು ವಿಸ್ತರಿಸುವುದಕ್ಕಾಗಿ 50 ಕೋಟಿ ರೂ. ಕಾಯ್ದಿರಿಸಲಾಗುವುದು ಎಂದು ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಪ್ರಯೋಗಾಲಯಗಳು, ಕಂಪ್ಯೂಟರ್ ಲ್ಯಾಬ್‌ಗಳು ಮತ್ತು ಇಂಟರ್ನೆಟ್ ಸೌಲಭ್ಯಗಳಿಗಾಗಿ 500 ಕೋಟಿ ರೂ. ಪ್ಯಾಕೇಜ್ ಅನ್ನು ನಿಗದಿಪಡಿಸಲಾಗಿದೆ. 2,000 ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ದ್ವಿಭಾಷಾ ಮಾಧ್ಯಮಿಕ ಶಾಲೆಗಳಾಗಿ ಪರಿವರ್ತಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸೂಚಿಸಿದ್ದಾರೆ.