ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಅವ್ಯವಹಾರದ ಸುದ್ದಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯದಲ್ಲಿ ಸಿಎಂ ಬದಲಾವಣೆಗೆ ಬೇಡಿಕೆಗಳು ಹೆಚ್ಚಾಗುತ್ತಿವೆ. ಸದ್ಯ ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯನವರ ವಿಚಾರಣೆ ನಡೆಯುತ್ತಿದ್ದು, ಈಗಾಗಲೇ ಲೋಕಾಯುಕ್ತ ಅಧಿಕಾರಗಳ ವಿಚಾರಣೆಗೆ ಸಿದ್ದರಾಮಯ್ಯ ಹಾಜರಾಗಿದ್ದಾರೆ.
ವಂಚನೆ ಆರೋಪದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಮತ್ತು ಅವರ ಸ್ಥಾನವನ್ನು ಬದಲಾಯಿಸಬೇಕು ಎಂದು ವಿರೋಧ ಪಕ್ಷದ ನಾಯಕರು ಒತ್ತಾಯಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಸಂಸದ ಬಸವರಾಜ ಬೊಮಾಯಿ ಹೊಸ ಬಾಂಬ್ ಸಿಡಿಸಿದ್ದಾರೆ.
ಶಿಗ್ಗಾಂವದಲ್ಲಿ ಬಸವರಾಜ್ ಬೊಮ್ಮಾಯಿ ಅವರು ಮಾತನಾಡಿದ್ದು, ಸಿಎಂ ರೇಸ್ ನಲ್ಲಿರೋ ಸಚಿವರೇ ಕಾಂಗ್ರೆಸ್ ಶಾಸಕರಿಗೆ ಹಣ ಕೊಡುತ್ತಿದ್ದಾರೆ. ಈ ಹತಾಷೆಯಿಂದ ಸಿಎಂ ಸಿದ್ದರಾಮಯ್ಯ ಏನೇನೋ ಮಾತನಾಡುತ್ತಿದ್ದಾರೆ. ಇದೀಗ ಒಂದೊಂದೇ ಹಗರಣ ಹೊರ ಬರುತ್ತಿದ್ದನಂತೆಯೇ ತಮ್ಮ ಬಗ್ಗೆ ತಾವೇ ಮಾತನಾಡುತ್ತಿದ್ದಾರೆ. ಈಗ ತಮ್ಮನ್ನು ತಾವೇ ಹೊಗಳಿಕೊಳ್ಳುತ್ತಿದ್ದಾರೆ. ಮುಂದೆ ಸಿಎಂ ಆಗಬೇಕೆಂದು ಕೆಲವರು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಅದಕ್ಕೆ ಪೂರಕವಾಗಿ ಅನುದಾನದ ಬಗ್ಗೆ ಅತೃಪ್ತಿ ವ್ಯಕ್ತಪಡಿಸ್ತಿರೋ ಶಾಸಕರಿಗೆ ಹಣ ಕೊಡುತ್ತಿದ್ದಾರೆ.
ಇನ್ನು ಸಿಎಂ ರೇಸ್ ವಿಚಾರ ಬಂದಾಗ ಸಿದ್ದರಾಮಯ್ಯ ಅವರು ಆರೋಪ ಮಾಡಿದಂತೆ ಬಿಜೆಪಿ 50 ಕೋಟಿ ಹಣವನ್ನು ಯಾರಿಗೂ ಕೊಡ್ತಿಲ್ಲ. ಹಣ ಕೊಡ್ತಿರೋರು ಕೆಲ ಕಾಂಗ್ರೆಸ್ ಸಚಿವರು ಎಂದು ಬೊಮ್ಮಾಯಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.