ಮೊರಾಕೊದ ಸಮುದ್ರದಲ್ಲಿ ದೋಣಿ ಮಗುಚಿ 50 ಮಂದಿ ಸಾವು, ರಕ್ಷಣಾ ಕಾರ್ಯಾಚರಣೆ ಜಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

80 ವಲಸಿಗರನ್ನು ಹೊತ್ತು ಅಕ್ರಮವಾಗಿ ಸ್ಪೇನ್​ಗೆ ತೆರಳಲು ಪ್ರಯತ್ನಿಸುತ್ತಿದ್ದ ದೋಣಿ ಮೊರಾಕೊದ ಸಮುದ್ರದಲ್ಲಿ ಮಗುಚಿದ ಪರಿಣಾಮ 40 ಪಾಕಿಸ್ತಾನಿಗಳು ಸೇರಿ ಒಟ್ಟು 50 ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮೊರೊಕನ್ ಅಧಿಕಾರಿಗಳು ದೋಣಿ ಮೂಲಕ 30 ಜನರನ್ನು ರಕ್ಷಿಸಿದರು. ಈ ದೋಣಿ ಜನವರಿ 2 ರಂದು ಮಾರಿಷಸ್‌ನಿಂದ ಹೊರಟಿತ್ತು. 50ಕ್ಕೂ ಹೆಚ್ಚು ವಲಸಿಗರು ಅಪಘಾತದಲ್ಲಿ ಮುಳುಗಿ ಸಾವನ್ನಪ್ಪಿರುವ ಶಂಕೆ ಇದೆ ಎಂದು ವಲಸೆ ಹಕ್ಕುಗಳ ಗುಂಪು ‘ವಾಕಿಂಗ್ ಬಾರ್ಡರ್ಸ್’ ಹೇಳಿದೆ. ಮೃತರ ಗುರುತುಗಳನ್ನು ದೃಢೀಕರಿಸಲು ಮತ್ತು ಬದುಕುಳಿದವರಿಗೆ ನೆರವು ನೀಡಲು ಪ್ರಯತ್ನಗಳು ನಡೆಯುತ್ತಿವೆ.

ಘಟನೆ ಕುರಿತು ಪಾಕಿಸ್ತಾನದ ವಿದೇಶಾಂಗ ಕಚೇರಿ ಹೇಳಿಕೆ ನೀಡಿದೆ. ರಕ್ಷಣಾ ಕಾರ್ಯಾಚರಣೆಯಲ್ಲಿ ನೆರವಾಗಲು ಮೊರಾಕೊದಲ್ಲಿರುವ ತನ್ನ ರಾಯಭಾರ ಕಚೇರಿ ಸ್ಥಳೀಯ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ ಎಂದು ಪಾಕಿಸ್ತಾನ ಹೇಳಿದೆ. ಹೆಚ್ಚುವರಿಯಾಗಿ, ಪಾಕಿಸ್ತಾನಿ ಪ್ರಜೆಗಳಿಗೆ ಸಹಾಯ ಮಾಡಲು ಮತ್ತು ಅಗತ್ಯ ನೆರವು ನೀಡಲು ಮೊರಾಕೊದಲ್ಲಿರುವ ಪಾಕಿಸ್ತಾನಿ ರಾಯಭಾರ ಕಚೇರಿಯ ತಂಡವನ್ನು ದಖ್ಲಾಗೆ ಕಳುಹಿಸಲಾಗಿದೆ.

- Advertisement - Ply

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!