Saturday, March 25, 2023

Latest Posts

ಸಂಚಾರ ನಿಯಮ ಉಲ್ಲಂಘಿಸಿ ದಂಡ ಪಾವತಿಗೆ 50% ರಿಯಾಯಿತಿ: ಇನ್ನೂ15 ದಿನಗಳ ಕಾಲ ಸಿಗಲಿದೆ ಕಾಲಾವಕಾಶ!

ಹೊಸದಿಗಂತ ಡಿಜಿಟಲ್ ಡೆಸ್ಕ್‌ :

ಸಂಚಾರ ನಿಯಮ ಉಲ್ಲಂಘಿಸಿ ದಂಡ ಬಾಕಿ (Traffic Fine) ಉಳಿಸಿಕೊಂಡಿರುವ ವಾಹನ ಸವಾರರಿಗೆ ಶೇ 50ರ ರಿಯಾಯಿತಿ ನೀಡಿದ್ದ ರಾಜ್ಯ ಸರ್ಕಾರ ಇದೀಗ ಮತ್ತೆ ಶೇ 50ರಷ್ಟು ದಂಡ ಪಾವತಿಗೆ ಮಾರ್ಚ್​ 4ರಿಂದ 15 ದಿನಗಳ ಕಾಲಾವಕಾಶ ನೀಡಿದೆ.

11-02-2023ರ ಒಳಗಾಗಿ ಅನ್ವಯವಾಗುವ ಪ್ರಕರಣಗಳಿಗೆ ಒಂದು ಬಾರಿಯ ಕ್ರಮವಾಗಿ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್​ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ 50ರ ರಿಯಾಯಿತಿ ನೀಡಲಾಗುತ್ತದೆ ಎಂದು ಆದೇಶಿಸಿದೆ.

ಈ ಹಿಂದೆ ಫೆಬ್ರವರಿ 11ರ ವರೆಗೆ 15 ದಿನಗಳ ಕಾಲ ಶೇ 50ರ ರಿಯಾಯಿತಿಯೊಂದಿಗೆ ದಂಡ ಪಾವತಿಸಲು ಅವಕಾಶ ನೀಡಲಾಗಿತ್ತು. ಇದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.
ಬಳಿಕ ರಿಯಾಯಿತಿ ದರದಲ್ಲಿ ದಂಡ ಪಾವತಿಸಲು ಅವಕಾಶ ವಿಸ್ತರಣೆ ಬಗ್ಗೆ ಫೆಬ್ರವರಿ 14ರಂದು ನಡೆದಿದ್ದ ಉನ್ನತ ಮಟ್ಟದ ಸಭೆಯಲ್ಲಿ ಪ್ರಸ್ತಾವನೆ ಸಲ್ಲಿಸಲಾಗಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!