Tuesday, September 2, 2025

ವಾಹನ ಮಾಲೀಕರಿಗೆ ಫೈನ್ ಕಟ್ಟಲು 50% ರಿಯಾಯಿತಿ: ಒಂದೇ ವಾರದಲ್ಲಿ ಬರೋಬ್ಬರಿ 28 ಕೋಟಿ ಸಂಗ್ರಹ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಸರ್ಕಾರ ಸಂಚಾರಿ ನಿಯಮ ಉಲ್ಲಂಘಿಸಿ, ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಮಾಲೀಕರಿಗೆ ಮತ್ತೊಮ್ಮೆ ಶೇ. 50 ರಷ್ಟು ರಿಯಾಯಿತಿ ಘೋಷಿಸಿದ್ದು, ಇದೀಗ ಒಂದೇ ವಾರದಲ್ಲಿ ಬರೋಬ್ಬರಿ 28 ಕೋಟಿಗೆ ಹೆಚ್ಚು ದಂಡ ಸಂಗ್ರಹವಾಗಿದೆ.

ಆಗಸ್ಟ್ 23 ರಿಂದ ಸೆಪ್ಟೆಂಬರ್ 12ರವರೆಗೆ ಶೇ. 50 ರಷ್ಟು ದಂಡ ಪಾವತಿ ಮಾಡಲು ಅವಕಾಶ ನೀಡಲಾಗಿದೆ. ಕಳೆದ 8 ದಿನದಲ್ಲಿ ಒಟ್ಟು 10,31,399 ಕೇಸ್ ಗಳನ್ನು ವಿಲೇವಾರಿ ಮಾಡಿ 28 ಕೋಟಿ 52 ಲಕ್ಷ 84 ಸಾವಿರ 600 ರೂ. ದಂಡ ಸಂಗ್ರಹ ಮಾಡಲಾಗಿದೆ ಎಂದು ಬೆಂಗಳೂರು ಸಂಚಾರಿ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನೂ ಹತ್ತು ದಿನಗಳ ಕಾಲ ರಿಯಾಯಿತಿ ದರದಲ್ಲಿ ದಂಡ ಕಟ್ಟಲು ಅವಕಾಶವಿದ್ದು, ಸುಮಾರು 50 ಕೋಟಿಯಷ್ಟು ದಂಡ ಸಂಗ್ರಹವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದನ್ನೂ ಓದಿ