ಚಿಕ್ಕಮಗಳೂರಿನ ಮೀಸಲು ಅರಣ್ಯ ಪ್ರದೇಶ ರಸ್ತೆಯಲ್ಲಿ 50 ಖಾಲಿ ಕ್ಯಾಟ್ರಿಡ್ಜ್ ಪತ್ತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಿಕ್ಕಮಗಳೂರಿನ ಮೂಡಿಗೆರೆಯ ಸಾರಗೋಡು-ತತ್ಕೊಳ ಮೀಸಲು ಅರಣ್ಯ ಪ್ರದೇಶದಲ್ಲಿ 50ಕ್ಕೂ ಹೆಚ್ಚು ಬಂದೂಕಿನ ಖಾಲಿ ಕ್ಯಾಟ್ರಿಡ್ಜ್‌ಗಳು ಪತ್ತೆಯಾಗಿವೆ.

ಕನ್ನಗದ್ದೆ ಸಂಪರ್ಕ ರಸ್ತೆ ಬದಿಯಲ್ಲಿ ಕ್ಯಾಟ್ರಿಡ್ಜ್‌ಗಳು ಪತ್ತೆಯಾಗಿದ್ದು, ಸಾರ್ವಜನಿಕರಿಗೆ ಸಾಕಷ್ಟು ಆತಂಕವುಂಟುಮಾಡಿದೆ. ವಿಷಯ ತಿಳಿಯುತ್ತಿದ್ದಂತೆಯೇ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿದ್ದಾರೆ. ಕ್ಯಾಟ್ರಿಡ್ಜ್‌ಗಳನ್ನು ವಶಕ್ಕೆ ಪಡೆದಿದ್ದು, ತನಿಖೆ ಆರಂಭಿಸಿದ್ದಾರೆ.

ಈ ಮಾರ್ಗವಾಗಿ ಸಂಚರಿಸುವ ವಾಹನಗಳ ಮೇಲೆ ಪೊಲೀಸರು ನಿಗಾ ಇಟ್ಟಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!