ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರತಿಕೂಲ ಹವಾಮಾನದ ದೃಷ್ಟಿಯಿಂದ, ಮುಂಬೈನಲ್ಲಿ 50 ವಿಮಾನಗಳನ್ನು ರದ್ದುಗೊಳಿಸಲಾಗಿದೆ ಮತ್ತು ಹಲವಾರು ವಿಮಾನಗಳ ಮಾರ್ಗಗಳನ್ನು ಬದಲಾಯಿಸಲಾಗಿದೆ ಎಂದು ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ತಿಳಿಸಿದೆ.
ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಬೆಂಬಲಿಸಲು ಮತ್ತು ಅವರಿಗೆ ಅಗತ್ಯ ಸಹಾಯವನ್ನು ಒದಗಿಸಲು ಟರ್ಮಿನಲ್‌ಗಳಾದ್ಯಂತ ಹಲವಾರು ವಿಮಾನ ನಿಲ್ದಾಣ ಸಿಬ್ಬಂದಿ ಮತ್ತು ವಿಮಾನಯಾನ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.
ಇದಕ್ಕೂ ಮುನ್ನ, ಮುಂಬೈ, ರಾಯಗಡ, ರತ್ನಗಿರಿ ಮತ್ತು ಸಿಂಧುದುರ್ಗಕ್ಕೆ ಸೋಮವಾರದಂದು ರೆಡ್ ಅಲರ್ಟ್ ಅನ್ನು ಮುಂಬೈ ಪ್ರಾದೇಶಿಕ ಹವಾಮಾನ ಕೇಂದ್ರ ನೀಡಿತ್ತು. ಆರ್‌ಎಂಸಿ ಪುಣೆ ಮತ್ತು ಸತಾರಾದಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ಜುಲೈ 12 ರವರೆಗೆ ಮುಂಬೈನ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ ಎಂದು IMD ಮುನ್ಸೂಚನೆ ನೀಡಿದೆ.