ನನ್ನನ್ನೂ ಸೇರಿ 50 ಮುಖಂಡರ ಮೇಲೆ ಲೋಕಾ, ಐಟಿ ದಾಳಿ ಸಾಧ್ಯತೆ: ಲಕ್ಷ್ಮೀ ಹೆಬ್ಬಾಳ್ಕರ್​​ ಆತಂಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಬೆಳಗಾವಿ ಜಿಲ್ಲೆಯ ಸುಮಾರು 50ಕ್ಕೂ ಹೆಚ್ಚು ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ನಿವಾಸಗಳ ಮೇಲೆ ಲೋಕಾಯುಕ್ತ ಮತ್ತು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಯುವ ಮುನ್ಸೂಚನೆ ಸಿಕ್ಕಿದೆ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಗಂಭೀರ ಆರೋಪ ಮಾಡಿದ್ದಾರೆ.

ಬೆಳಗಾವಿಯ ತಮ್ಮ ಗೃಹ ಕಚೇರಿಯಲ್ಲಿ ಇಂದು ಬೆಳಗ್ಗೆ ತುರ್ತು ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು “ಚುನಾವಣೆಗೆ ಕೇವಲ 10 ದಿನ ಬಾಕಿ ಉಳಿದಿದ್ದು, ನಮಗೆ ಪ್ರತಿ ಕ್ಷಣವೂ ಮುಖ್ಯ. ಆದರೆ ಈ ಸಂದರ್ಭದಲ್ಲಿ ನಾವು ಪ್ರಚಾರ ಕಾರ್ಯದಲ್ಲಿ ಭಾಗಿಯಾಗಲು ಸಾಧ್ಯವಾಗದಂತೆ ಕಟ್ಟಿ ಹಾಕುವ ಸಂಚು ರೂಪಿಸಲಾಗಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಸೇರಿ ರಾಜ್ಯದಲ್ಲಿ ಒಟ್ಟು 50 ಮಂದಿ ಮುಖಂಡರ ಮೇಲೆ ಇನ್ನು ಒಂದೆರಡು ದಿನದಲ್ಲಿ ದಾಳಿ ನಡೆಸುವ ಬಗ್ಗೆ ಮಾಹಿತಿ ಸಿಕ್ಕಿದೆ. ಇದರಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ನನ್ನನ್ನೂ ಸೇರಿ ಒಟ್ಟು ಮೂವರು ಕಾಂಗ್ರೆಸ್ ಮುಖಂಡರ ಮೇಲೆ ಲೋಕಾಯುಕ್ತ ದಾಳಿ ನಡೆಯಲಿದೆ ಎಂದು ಮಾಹಿತಿ ದೊರೆತಿದೆ ಎಂದರು.

ವಾಮಮಾರ್ಗ ಕೈ ಬಿಟ್ಟು ಸತ್ಯ, ಧರ್ಮದ ಮೇಲೆ ಚುನಾವಣೆ ನಡೆಯಬೇಕು. ರಾಜ್ಯದ ಕಾಂಗ್ರೆಸ್ ಪಕ್ಷದ ವಕ್ತಾರೆಯಾಗಿ ಸುದ್ದಿಗೋಷ್ಠಿ ಮಾಡುತ್ತಿದ್ದೇನೆ. 50 ಜನರಲ್ಲಿ ನನ್ನ ಹೆಸರು ಸಹ ಇದೆ ಎಂಬ ಮಾಹಿತಿ ಇದೆ ಎಂದು ಹೇಳಿದರು.

ಜನರ ಭಾವನೆ ಕದಡಲು ಈ ರೀತಿಯ ಪ್ರಯತ್ನಿಸಲಾಗುತ್ತಿದೆ. 1 ಸಾವಿರ ಆದಾಯ ತೆರಿಗೆ ಅಧಿಕಾರಿಗಳು ಬಂದಿರುವ ಮಾಹಿತಿಯಿದೆ ಎಂದರು.

ದೇಶದಲ್ಲಿ ಯಾವುದೇ ರಾಜ್ಯದಲ್ಲಿ ಚುನಾವಣೆ ಸಂದರ್ಭದಲ್ಲಿ ಈ ರೀತಿ ವಿಪಕ್ಷಗಳನ್ನ ಹೆದರಿಸೋದು ಸರ್ವೇಸಾಮಾನ್ಯ. ಅವರು ಏನು ಮಾಡುತ್ತಿದ್ದಾರೆ ಅದೇ ಅವರಿಗೆ ತಿರುಗು ಬಾಣವಾಗುತ್ತೆ ಎಂದು ಕಾಂಗ್ರೆಸ್​ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್​ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!