ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾಗಿ 50 ವರ್ಷವಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ಈ ಸಂಬಂಧ ಪೋಸ್ಟರ್ ವೊಂದನ್ನು ಬಿಡುಗಡೆ ಮಾಡಿದೆ. 1975ರ ತುರ್ತು ಪರಿಸ್ಥಿತಿಗೆ 50 ವರ್ಷವಾಗಿದ್ದು, ಕರಾಳ ವರ್ಷವೆಂದು ಬಿಜೆಪಿ ಆರೋಪಿಸಿದೆ.
ಈ ಸಂಬಂಧ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಲಾಯಿತು. ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ, ವಿಧಾನ ಪರಿಷತ್ ಮುಖ್ಯ ಸಚೇತಕ ಎನ್. ರವಿಕುಮಾರ್, ಮಾಜಿ ಸಚಿವ ಸುನೀಲ್ ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಈ ವೇಳೆ ಸಿ.ಟಿ. ರವಿ, 1975ರಲ್ಲಿ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಆಡಳಿತದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿತ್ತು. ಪ್ರಜಾಪ್ರಭುತ್ವ ವಿರುದ್ಧ ಧನಿ ಎತ್ತಿದವರನ್ನು ಜೈಲಿಗೆ ಕಳುಹಿಸಿದ್ದರು. ಕಾಂಗ್ರೆಸ್ಸೇತರ ಪಕ್ಷಗಳು ಒಗ್ಗೂಡಿ ಹೋರಾಟ ನಡೆಸಿದ್ದವು. ಎಂದರು. ಇಂದಿರಾಗಾಂಧಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಹೇರಿದ್ದ ತುರ್ತು ಪರಿಸ್ಥಿತಿಯ ವಿರುದ್ಧ ಜನಜಾಗೃತಿ ಮೂಡಿಸಲಾಗುವುದು. ಈ ಸಂಬಂಧ ರಾಜ್ಯಾದ್ಯಂತ ಬಿಜೆಪಿ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ ಎಂದರು.
ಜೂನ್ 25 ರಂದು ದೇಶದಲ್ಲಿ ಮಾಜಿ ಪ್ರಧಾನಿ ಇಂದಿರಾಗಾಂಧಿಯವರು ತುರ್ತು ಪರಿಸ್ಥಿತಿ ಹೇರಿ 50 ವರ್ಷಗಳಾಗಲಿರುವ ಹಿನ್ನೆಲೆಯಲ್ಲಿ ತುರ್ತು ಪರಿಸ್ಥಿತಿ ವಿರುದ್ಧ ಜನಜಾಗೃತಿ ಅಭಿಯಾನವನ್ನು ವಿವಿಧ ಜಿಲ್ಲೆಗಳಲ್ಲಿ ಜೂನ್ 22 ರಿಂದ 30 ರ ವರೆಗೆ ಹಮ್ಮಿಕೊಳ್ಳಲಾಗಿದ್ದು, ಇಂದು ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನಡೆದ… pic.twitter.com/qcRfxxmR9f
— BJP Karnataka (@BJP4Karnataka) June 19, 2025