ಸರ್ಕಾರಿ ಶಾಲೆಗಳ ಅಭಿವೃದ್ಧಿ, ಉನ್ನತೀಕರಣಕ್ಕೆ 500 ಕೋಟಿ ರೂ. ಮೀಸಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈ ಬಾರಿ ಬಜೆಟ್‌ನಲ್ಲಿ ಸರ್ಕಾರಿ ಶಾಳೆಗಳಿಗೆ ಸರ್ಕಾರ ಒತ್ತು ನೀಡಿದ್ದು, ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ 500 ಕೋಟಿ ರೂ. ಮೀಸಲಿಡಲಾಗಿದೆ.
ಮೂಲ ಸೌಕರ್ಯ ಇರುವ ಶಾಲೆಗಳ ಉನ್ನತೀಕರಣ, ಆಯ್ದ ಅಭಿವೃದ್ಧಿ ಆಕಾಂಕ್ಷಿ ತಾಲೂಕುಗಳಿಗೆ ಆದ್ಯತೆ ನೀಡಲಾಗಿದೆ.

ಸರ್ಕಾರಿ ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಪೀಠೋಪಕರಣ ಒದಗಿಸಲು 100 ಕೋಟಿ.ರೂ. ಮೀಸಲಿಡಲಾಗಿದೆ. ಇನ್ನು ನೋಡಿ ಕಲಿ ಮಾಡಿ ತಿಳಿ ಯೋಜನೆ ಅಡಿ ರಾಜ್ಯದ 169 ಸರ್ಕಾರಿ ಬಾಲಕಿಯರ ಪ್ರೌಢಶಾಲೆಗಳಿಗೆ ಲ್ಯಾಬ್ ಇನ್-ಎ- ಕಿಟ್ ವಿತರಣೆಗೆ ನಿರ್ಧರಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!