ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಳೆದ ಹಲವು ದಿನಗಳಿಂದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆರೋಪಗಳನ್ನು ಮಾಡುತ್ತಲೇ ಬರುತ್ತಿದ್ದು, ಇದೀಗ ವರ್ಗಾವಣೆ ದಂಧೆಯಲ್ಲಿ 500 ಕೋಟಿ ವಹಿವಾಟು ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಡಿ.ಕೆ., ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಕೇವಲ 2 ತಿಂಗಳಲ್ಲೇ ವರ್ಗಾವಣೆ ದಂಧೆಯಲ್ಲಿ 500 ಕೋಟಿ ವಹಿವಾಟು ನಡೆದಿದೆ ಎಂದು ಹೇಳಿದ್ದಾರೆ.
ಪ್ರತಿಯೊಂದು ಇಲಾಖೆಯಲ್ಲಿಯೂ ವರ್ಗವಣೆ ದಂಧೆ ನಡೆಯುತ್ತಿದೆ. ಅಧಿಕಾರಿಯೊಬ್ಬರು ನನಗೆ ಈ ಮಾಹಿತಿ ನೀಡಿದ್ದಾರೆ. ಕೇವಲ 2 ತಿಂಗಳಲ್ಲಿ 500 ಕೋಟಿಗೂ ಹೆಚ್ಚು ವಹಿವಾಟು ನಡೆದಿದೆ ಎಂದು ತಿಳಿಸಿದ್ದಾರೆ ಎಂದರು.