ಹೊಸದಿಗಂತ ಡಿಜಿಟಲ್ ಡೆಸ್ಕ್:
ಮ್ಮ 16ನೇ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಜಿಲ್ಲೆ ಮೈಸೂರಿಗೆ ಭರಪೂರ ಯೋಜನೆಗಳನ್ನ ಘೋಷಣೆ ಮಾಡಿದ್ದಾರೆ.
ಮೈಸೂರಿನಲ್ಲಿ ವಿಶ್ವದರ್ಜೆಯ ಫಿಲ್ಮ್ ಸಿಟಿ ನಿರ್ಮಾಣಕ್ಕೆ 500 ಕೋಟಿ ಮೀಸಲಿಡುವುದಾಗಿ ಘೋಷಿಸಿದ್ದಾರೆ. ಅಲ್ಲದೇ ಮೈಸೂರು ವಿಮಾನ ನಿಲ್ದಾಣ ರನ್ ವೇ ವಿಸ್ತರಣೆಗೆ ಭೂಸ್ವಾಧೀನಕ್ಕೆ 319 ಕೋಟಿ ರೂ. ಅನುದಾನ, 100 ಕೋಟಿ ರೂ. ವೆಚ್ಚದಲ್ಲಿ ನಿಮ್ಹಾನ್ಸ್ ಮಾದರಿ ಆಸ್ಪತ್ರೆ ನಿರ್ಮಾಣ ಸೇರಿದಂತೆ ಹತ್ತು ಹಲವು ಯೋಜನೆಗಳನ್ನ ಘೋಷಿಸಿದ್ದಾರೆ.