ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………….
ಹೊಸದಿಗಂತ ಆನ್ ಲೈನ್ ಡೆಸ್ಕ್:
ಕೊರೋನಾ ಎರಡನೇ ಅಲೆ ನಿಯಂತ್ರಿಸಲು ದೆಹಲಿಯಲ್ಲಿ ಲಾಕ್ ಡೌನ್ ಜಾರಿಗೊಳಿಸಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ , ಇದೀಗ ರಾಷ್ಟ್ರ ರಾಜಧಾನಿಯಲ್ಲಿ ರೇಷನ್ ಕಾರ್ಡ್ ಹೊಂದಿರುವ 72 ಲಕ್ಷ ಮಂದಿಗೆ ಮುಂದಿನ ಎರಡು ತಿಂಗಳವರೆಗೆ ಉಚಿತ ಪಡಿತರ ನೀಡುವುದಾಗಿ ಮತ್ತು ಆಟೋರಿಕ್ಷಾ ಹಾಗೂ ಟ್ಯಾಕ್ಸಿ ಚಾಲಕರಿಗೆ ತಲಾ 5,000 ರೂ. ಆರ್ಥಿಕ ನೆರವು ನೀಡುವುದಾಗಿ ಮಂಗಳವಾರ ಘೋಷಿಸಿದ್ದಾರೆ.
ಕೊರೋನಾ ಚೈನ್ ಬ್ರೇಕ್ ಮಾಡಲು ರಾಷ್ಟ್ರ ರಾಜಧಾನಿಯಲ್ಲಿ ವಿಧಿಸಲಾದ ಲಾಕ್ಡೌನ್ ಎರಡು ತಿಂಗಳವರೆಗೆ ಇರುತ್ತದೆ ಎಂದು ಅರ್ಥವಲ್ಲ .ದೆಹಲಿಯ ಪರಿಸ್ಥಿತಿ ಸುಧಾರಿಸುತ್ತದೆ ಮತ್ತು ಲಾಕ್ ಡೌನ್ ಅಗತ್ಯವಿಲ್ಲ ಎಂದು ಕೇಜ್ರಿವಾಲ್ ಸ್ಪಷ್ಟಪಡಿಸಿದ್ದಾರೆ.
ಕಳೆದ ವರ್ಷದ ಲಾಕ್ಡೌನ್ ಸಮಯದಲ್ಲಿ ದೆಹಲಿ ಸರ್ಕಾರವು 1.56 ಲಕ್ಷ ಆಟೋ ಮತ್ತು ಟ್ಯಾಕ್ಸಿ ಡ್ರೈವರ್ಗಳಿಗೆ ತಲಾ 5,000 ರೂ.ಗಳ ಆರ್ಥಿಕ ನೆರವು ನೀಡಿತ್ತು. ಈಗ ಮತ್ತೆ ಅವರಿಗೆ ಸಹಾಯ ಮಾಡಲು 5 ಸಾವಿರ ರೂಪಾಯಿ ನೀಡಲಾಗುತ್ತಿದೆ ಎಂದಿದ್ದಾರೆ.
ರಾಷ್ಟ್ರ ರಾಜಧಾನಿಯಲ್ಲಿ ಲಾಕ್ ಡೌನ್ ಅನ್ನು ಮೇ 10 ರವರೆಗೆ ವಿಸ್ತರಿಸಲಾಗಿದೆ.