Sunday, August 14, 2022

Latest Posts

ಕೊರೋನಾದಿಂದ ಮೃತಪಟ್ಟ ಪ್ರತಿಯೊಬ್ಬರ ಕುಟುಂಬಕ್ಕೆ 50,000 ರೂ. ಪರಿಹಾರ!

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೊರೋನಾದಿಂದ ಸಾವನ್ನಪ್ಪಿದವರ ಕುಟುಂಬಗಳಿಗೆ ಕೇಂದ್ರದಿಂದ 50,000 ರೂ. ಪರಿಹಾರವನ್ನು ರಾಜ್ಯ ಸರ್ಕಾರಗಳು ನೀಡಲಿವೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್​ಗೆ ಮಾಹಿತಿ ನೀಡಿದೆ.
ಇದು ಮಾತ್ರವಲ್ಲ, ಈಗಾಗಲೇ ಮೃತಪಟ್ಟವರ ಕುಟುಂಬದವರು ಮಾತ್ರವಲ್ಲದೆ ಭವಿಷ್ಯದಲ್ಲಿ ಕೊರೋನಾ ಸಾವುಗಳಿಗೂ ಪರಿಹಾರವನ್ನು ನೀಡಲಾಗುವುದು ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ.
ರಾಜ್ಯ ಸರ್ಕಾರವು ಈ ಮೊತ್ತವನ್ನು ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ನೀಡುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಸುಪ್ರೀಂ ಕೋರ್ಟ್ ಸೂಚನೆಗಳ ನಂತರ ಪರಿಹಾರದ ಕುರಿತು ಎನ್‌ಡಿಎಂಎ ಮಾರ್ಗಸೂಚಿಗಳನ್ನು ರಚಿಸಲಾಗಿದೆ.
ಪರಿಹಾರ ಪಡೆಯಲು ಅರ್ಹರಾದ ಕುಟುಂಬದವರು ಆಯಾ ಜಿಲ್ಲೆಗಳ ವಿಪತ್ತು ನಿರ್ವಹಣಾ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿಯೊಂದಿಗೆ, ವೈದ್ಯಕೀಯ ಪ್ರಮಾಣಪತ್ರದೊಂದಿಗೆ ‘ಕೊರೊನಾದಿಂದ ಸಾವು’ ಎಂದು ನಮೂದಿಸುವ ಪ್ರಮಾಣಪತ್ರವನ್ನು ಸಲ್ಲಿಸಬೇಕು.
ಕೋವಿಡ್​ನಿಂದ ಸಾವನ್ನಪ್ಪಿರುವ ಬಿಪಿಎಲ್​ ಕಾರ್ಡ್​​​ದಾರರಿಗೆ ರಾಜ್ಯದಲ್ಲಿ ಈಗಾಗಲೇ 1 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ಭಾರತದಲ್ಲಿ ಕೊರೊನಾ ವೈರಸ್​ನಿಂದಾಗಿ ಈವರೆಗೆ 4.46 ಲಕ್ಷ ಜನರು ಸಾವನ್ನಪ್ಪಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss