ರಾಜ್ಯದಲ್ಲಿ 5,031 ಮಂದಿಗೆ ಕೊರೋನಾ ಪಾಸಿಟಿವ್, 226 ಓಮಿಕ್ರಾನ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಏರುತ್ತಿದ್ದು, ಇಂದು 5,031 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ.
ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಬೆಂಗಳೂರಿನಲ್ಲಿ 4,324 ಸೇರಿದಂತೆ ರಾಜ್ಯಾಧ್ಯಂತ 5031 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿರೋದಾಗಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಪಾಸಿಟಿವಿಟಿ ದರ ಶೇ.7.5ಕ್ಕೆ ಏರಿಕೆಯಾಗಿದೆ. ಕೋವಿಡ್ ನಿಂದಾಗಿ ಬೆಂಗಳೂರಿನಲ್ಲಿ ಓರ್ವ ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಶೇ.3.95ರಷ್ಟು ಪಾಸಿಟಿವಿಟಿ ದರವಿದೆ. ರಾಜ್ಯದಲ್ಲಿ ಈಗ 226 ಓಮಿಕ್ರಾನ್ ಸೋಂಕಿತರಿದ್ದಾರೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!