October 16, 2026
Friday, October 16, 2026
spot_img

ಇಡೀ ಭಾರತವನ್ನೇ ಬೆಚ್ಚಿಬೀಳಿಸಿದ್ದ 21 ತಿಂಗಳ ತುರ್ತು ಪರಿಸ್ಥಿತಿ ಇತಿಹಾಸಕ್ಕೆ 51 ವರ್ಷ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಭಾರತವನ್ನೇ ನಡುಗಿಸಿದ್ದ 21 ತಿಂಗಳ ತುರ್ತು ಪರಿಸ್ಥಿತಿ ಇತಿಹಾಸಕ್ಕೆ 51 ವರ್ಷ! ಹೌದು, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗಾಳಿಗೆ ತೂರಿ, ನಾಗರಿಕರ ಮೂಲಭೂತ ಹಕ್ಕುಗಳನ್ನು ಕಸಿದುಕೊಂಡು, ಸರ್ವಾಧಿಕಾರಿ ಆಡಳಿತ ನಡೆಸಿದ ಆ 21 ತಿಂಗಳುಗಳು ಇಂದಿಗೂ ಭಾರತೀಯರ ನೆನಪಿನಲ್ಲಿ ಮಾಸದ ಗಾಯವಾಗಿ ಉಳಿದಿವೆ.

1975ರಲ್ಲಿ ದೇಶದಲ್ಲಿ ಜಾರಿಗೊಳಿಸಲಾದ ತುರ್ತು ಪರಿಸ್ಥಿತಿ ಭಾರತದ ಸಂವಿಧಾನದ ಮೇಲಿನ ನೇರ ದಾಳಿಯಾಗಿತ್ತು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ಹೇಳಿದ್ದಾರೆ. ಜೂನ್ 25ರ ದೇಶದ ಕರಾಳ ಇತಿಹಾಸದ ನೆನಪಿಗಾಗಿ ಆಚರಿಸಲಾಗುತ್ತಿರುವ ‘ಸಂವಿಧಾನ ಹತ್ಯಾ ದಿವಸ್’ ಅಂಗವಾಗಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಜಾಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಲು ಹೋರಾಡಿದ ಪ್ರತಿಯೊಬ್ಬರಿಗೂ ಗೌರವ ನಮನ ಸಲ್ಲಿಸಿದ್ದಾರೆ.

ನಾಗರಿಕರ ಮೂಲಭೂತ ಹಕ್ಕುಗಳ ಅಮಾನತು, ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ನಿರ್ಬಂಧ, ರಾಜಕೀಯ ನಾಯಕರು, ಪತ್ರಕರ್ತರು ಹಾಗೂ ಸಾಮಾಜಿಕ ಕಾರ್ಯಕರ್ತರ ಬಂಧನ ಮತ್ತು ಪ್ರಜಾಪ್ರಭುತ್ವದ ಸಂಸ್ಥೆಗಳ ಮೇಲಿನ ದಾಳಿಯನ್ನು ಸ್ಮರಿಸಿದ್ದಾರೆ.

Must Read