ಹೊಸದಿಗಂತ ಡಿಜಿಟಲ್ ಡೆಸ್ಕ್:
ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತೆ ಎಂದು ಕಾಯುತ್ತಾ ಕುಳಿತಿರುವ ಮಹಿಳಾಮಣಿಗಳಿಗೆ ಶಾಕ್ ಆಗಿದೆ.ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ.
ಹೌದು, ಗೃಹಲಕ್ಷ್ಮಿ ಯೋಜನೆಗೆ ನೋಂದಣಿಯಾದರೂ 52,000 ಕ್ಕೂ ಹೆಚ್ಚು ಮಹಿಳೆಯರಿಗೆ ಹಣ ಬರುತ್ತಿಲ್ಲ. ಈ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿದ್ದಾರೆ.
ಇದನ್ನೂ ಓದಿ: ಪಬ್‌ನಲ್ಲಿ ಪಾರ್ಟಿ ಮಾಡಿ, ಮನೆಗೆ ಹೋಗೋಕೆ ಹೆದರಿ ಪ್ರಾಣಬಿಟ್ಟ ಅಪ್ರಾಪ್ತ ವಯಸ್ಸಿನ ಬಾಲಕ
ಜಿಎಸ್‌ಟಿ ಹಾಗೂ ಆದಾಯ ತೆರಿಗೆ ಕಟ್ಟುತ್ತಿರುವ 52,000 ಕ್ಕೂ ಹೆಚ್ಚು ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತಿಲ್ಲ. ಇದರಲ್ಲಿ 20 ಸಾವಿರ ಫಲಾನುಭವಿಗಳ ಸಮಸ್ಯೆಯನ್ನು ಇತ್ಯರ್ಥ ಪಡಿಸಲಾಗಿದ್ದು, ಇನ್ನು ಉಳಿದವರ ಸಮಸ್ಯೆಯನ್ನು ಸರಿಪಡಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಮಾಹಿತಿ ನೀಡಿದರು.
ಜಿಎಸ್‌ಟಿ ಹಾಗೂ ಆದಾಯ ತೆರಿಗೆ ಇಲಾಖೆಗಳ ದಾಖಲೆಯಲ್ಲೂ ಇದೇ ರೀತಿ ತೋರಿಸುತ್ತಿದ್ದು, ಇದರಿಂದ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತಿದ್ದು, ಸರ್ಕಾರದ ಹಾಗೂ ನಮ್ಮ ಇಲಾಖೆಯದ್ದು ಯಾವುದೇ ತಪ್ಪಿಲ್ಲ ಎಂದರು.



