BUDGET | ‌ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ, 226.53 ಕೋಟಿ ಮಹಿಳೆಯರಿಗೆ ಲಾಭ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಹೆಂಗಳೆಯರ ಫೇವರೆಟ್‌ ಶಕ್ತಿ ಯೋಜನೆಗೆ 5,300 ಕೋಟಿ ಅನುದಾನವನ್ನು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಮಹಿಳೆಯರ ಸಬಲೀಕರಣಕ್ಕಾಗಿ ಮತ್ತು ಸಾಮರ್ಥ್ಯ ವೃದ್ಧಿಗಾಗಿ ಪ್ರಪ್ರಥಮವಾಗಿ ಜಾರಿಗೆ ತರಲಾಗಿರುವ ʻಶಕ್ತಿʼ ಯೋಜನೆಯಡಿ ಪ್ರಸಕ್ತ ವರ್ಷ ಇದುವರೆಗೆ ಒಟ್ಟು 226.53 ಕೋಟಿ ಮಹಿಳಾ ಪ್ರಯಾಣಿಕರು ಸೌಲಭ್ಯ ಪಡೆದಿರುತ್ತಾರೆ.

ಮಹಿಳೆಯರ ಸ್ವಾವಲಂಬನೆ ಮತ್ತು ಆರ್ಥಿಕ ಅಭಿವೃದ್ಧಿಗೆ ಶಕ್ತಿ ತುಂಬಿದ ಈ ಯೋಜನೆಗಾಗಿ 2024-25 ನೇ ಸಾಲಿನಲ್ಲಿ 5,015 ಕೋಟಿ ರೂ. ವೆಚ್ಚ ಭರಿಸಲಾಗಿದ್ದು, 2025-26ನೇ ಸಾಲಿಗೆ 5,300 ಕೋಟಿ ರೂ. ಒದಗಿಸಲಾಗಿರುತ್ತದೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!