ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸ ದಿಗಂತ ವರದಿ, ಕಾಸರಗೋಡು:
ಜಿಲ್ಲೆಯಲ್ಲಿ ಭಾನುವಾರ 243 ಮಂದಿಗೆ ಕೊರೋನಾ ಪಾಸಿಟಿವ್ ಆಗಿದೆ. ಈ ಪೈಕಿ 235 ಜನರಿಗೆ ಸಂಪರ್ಕದ ಮೂಲಕ ವೈರಸ್ ಬಾಧಿಸಿದೆ. ಅಲ್ಲದೆ ಜಿಲ್ಲೆಯಲ್ಲಿ 532 ಮಂದಿ ಸೋಂಕುಮುಕ್ತರಾದರು. ಇದೇ ವೇಳೆ ಕೇರಳದಲ್ಲಿ ಹೊಸದಾಗಿ 10,402 ಜನರಿಗೆ ಕೋವಿಡ್ ವೈರಸ್ ದೃಢಗೊಂಡಿದೆ. ಇದರಲ್ಲಿ 9674 ಮಂದಿಗೆ ಸಂಪರ್ಕದಿಂದ ಸೋಂಕು ತಗಲಿದೆ. ರಾಜ್ಯದಲ್ಲಿ 25,586 ಜನರು ಗುಣಮುಖರಾದರು. ಈ ಮೂಲಕ ರಾಜ್ಯದಲ್ಲಿ ಭಾನುವಾರ ಭಾರೀ ಸಂಖ್ಯೆಯಲ್ಲಿ ಕೊರೋನಾ ಬಾಧಿತರು ಸೋಂಕುಮುಕ್ತರಾದರು.
ಕೇರಳದ ಜಿಲ್ಲೆಗಳ ಪೈಕಿ ಮಲಪ್ಪುರಂ ಜಿಲ್ಲೆಯಲ್ಲಿ 1577, ಕಲ್ಲಿಕೋಟೆ 1376, ಪಾಲಕ್ಕಾಡು 1133, ಎರ್ನಾಕುಳಂ 1101, ತೃಶೂರು 1007, ಕಣ್ಣೂರು 778, ಕೊಲ್ಲಂ 766, ಆಲಪ್ಪುಳ 644, ತಿರುವನಂತಪುರ 484, ಕೋಟ್ಟಾಯಂ 415, ಪತ್ತನಂತ್ತಿಟ್ಟ 338, ಇಡುಕ್ಕಿ 275, ವಯನಾಡು 265, ಕಾಸರಗೋಡು ಜಿಲ್ಲೆಯಲ್ಲಿ 243 ಜನರಿಗೆ ಕೊರೋನಾ ಪಾಸಿಟಿವ್ ಆಗಿದೆ. ಈ ಮಧ್ಯೆ ಕೇರಳದಲ್ಲಿ ಭಾನುವಾರ ಕೋವಿಡ್ ಸೋಂಕು ಬಾಧಿಸಿ 66 ಮಂದಿ ಮೃತಪಟ್ಟರು. ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಒಟ್ಟು 19,494 ಜನರು ಸಾವಿಗೀಡಾದರು.