ಕೊಡಗು ಜಿಲ್ಲೆಯಲ್ಲಿ 540 ಹೊಸ ಕೋವಿಡ್ ಪ್ರಕರಣ ದೃಢ

ಹೊಸದಿಗಂತ ವರದಿ,ಮಡಿಕೇರಿ:

ಕೊಡಗು ಜಿಲ್ಲೆಯಲ್ಲಿ ಶನಿವಾರ 540 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ.ಹಾಗೂ ಒಬ್ಬರು ಸಾವಿಗೀಡಾಗಿದ್ದಾರೆ.
ಮಡಿಕೇರಿ ತಾಲೂಕಿನಲ್ಲಿ 136, ಸೋಮವಾರಪೇಟೆ ತಾಲೂಕಿನಲ್ಲಿ 237, ವೀರಾಜಪೇಟೆ ತಾಲೂಕಿನಲ್ಲಿ 167 ಹೊಸ ಪ್ರಕರಣಗಳು ದೃಢಪಟ್ಟಿವೆ.
ಇದರೊಂದಿಗೆ ಜಿಲ್ಲೆಯಲ್ಲಿನ ಕೊರೋನಾ ಸೋಂಕಿತರ ಒಟ್ಟು ಸಂಖ್ಯೆ 43,244ರಷ್ಟಾಗಿದ್ದು, ಕಳೆದ 24 ಗಂಟೆಗಳಲ್ಲಿ 785 ಮಂದಿ ಗುಣಮುಖರಾಗುವುದರೊಂದಿಗೆ ಇದುವರೆಗೆ ಒಟ್ಟು 38,934ಮಂದಿ ಸೋಂಕು ಮುಕ್ತರಾದಂತಾಗಿದೆ. ಒಬ್ಬರು ಸಾವಿಗೀಡಾಗುವುದರೊಂದಿಗೆ ಸೋಂಕಿಗೆ ಬಲಿಯಾದವರ ಸಂಖ್ಯೆ 442ಕ್ಕೆ ಏರಿಕೆಯಾಗಿದೆ.270 ಕಂಟೈನ್ ಮೆಂಟ್ ವಲಯಗಳು ಹಾಗೂ ಪಾಸಿಟಿವಿಟಿ ದರ ಶೇ. 16.04ರಷ್ಟಿದೆ ಎಂದು ಜಿಲ್ಲಾಧಿಕಾರಿ ಡಾ. ಬಿ.ಸಿ.ಸತೀಶ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!