Monday, July 4, 2022

Latest Posts

ಕಾಸರಗೋಡು ಜಿಲ್ಲೆಯಲ್ಲಿ ಇಂದು 551 ಮಂದಿ ಗುಣಮುಖ: 215 ಜನರಿಗೆ ಕೊರೋನಾ ಪಾಸಿಟಿವ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ವರದಿ, ಕಾಸರಗೋಡು:

ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 215 ಮಂದಿಗೆ ಕೊರೋನಾ ವೈರಸ್ ದೃಢಗೊಂಡಿದೆ. ಈ ಪೈಕಿ 210 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಅಲ್ಲದೆ ಜಿಲ್ಲೆಯಲ್ಲಿ 551 ಮಂದಿ ಗುಣಮುಖರಾದರು. ಇದೇ ವೇಳೆ ಕೇರಳದಲ್ಲಿ ಹೊಸದಾಗಿ 9313 ಜನರಿಗೆ ಕೋವಿಡ್ ವೈರಸ್ ದೃಢಪಟ್ಟಿದೆ. ಇದರಲ್ಲಿ 8570 ಮಂದಿಗೆ ಸಂಪರ್ಕದಿಂದ ಸೋಂಕು ತಗಲಿದೆ. ರಾಜ್ಯದಲ್ಲಿ 21,921 ಜನರು ರೋಗಮುಕ್ತರಾದರು.
ಕೇರಳದ ಜಿಲ್ಲೆಗಳ ಪೈಕಿ ತಿರುವನಂತಪುರ ಜಿಲ್ಲೆಯಲ್ಲಿ 1481, ಪಾಲಕ್ಕಾಡು 1028, ಎರ್ನಾಕುಳಂ 968, ತೃಶೂರು 925, ಮಲಪ್ಪುರಂ 908, ಕೊಲ್ಲಂ 862, ಆಲಪ್ಪುಳ 803, ಕಲ್ಲಿಕೋಟೆ 659, ಕೋಟ್ಟಾಯಂ 464, ಕಣ್ಣೂರು 439, ಇಡುಕ್ಕಿ 234, ಕಾಸರಗೋಡು 215, ಪತ್ತನಂತ್ತಿಟ್ಟ 199, ವಯನಾಡು ಜಿಲ್ಲೆಯಲ್ಲಿ 128 ಜನರಿಗೆ ಕೊರೋನಾ ಪಾಸಿಟಿವ್ ಆಗಿದೆ. ಈ ಮಧ್ಯೆ ಕೋವಿಡ್ ವೈರಸ್ ಬಾಧಿಸಿ ಕೇರಳದಲ್ಲಿ ಸೋಮವಾರ 221 ಮಂದಿ ಮೃತಪಟ್ಟರು. ಈ ಮೂಲಕ ಇದುವರೆಗೆ ರಾಜ್ಯದಲ್ಲಿ ಒಟ್ಟು 10,157 ಜನರು ಸಾವಿಗೀಡಾದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss