ಚೀನಾದಲ್ಲಿ ಕೊರೊನಾ ಸೋಂಕಿಗೆ ಒಂದೇ ದಿನ 56 ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕೊರೊನಾ ತವರು ಚೀನಾದಲ್ಲಿ ಜನ ತತ್ತರಿಸಿದ್ದಾರೆ. ದಿನದಿಂದ ದಿನಕ್ಕೆ ಕೋವಿಡ್‌ ಸೋಂಕು ಹೆಚ್ಚಾಗುತ್ತಿದೆ. ಸೋಮವಾರ ಒಂದೇ 56 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈ ಮೂಲಕ ನಗರದಲ್ಲಿ ಕೋವಿಡ್‌ನಿಂದ ಸಾವನ್ನಪ್ಪಿದವರ ಸಂಖ್ಯೆ 138ಕ್ಕೆ ಏರಿಕೆಯಾಗಿದೆ. ಕೋವಿಡ್ ಹರಡುವುದನ್ನು ತಡೆಯಲು ಶಾಂಘೈನಲ್ಲಿ ಲಾಕ್‌ಡೌನ್ ಮೂರು ವಾರಗಳವರೆಗೆ ಮುಂದುವರಿಯಲಿದೆ. ಕಟ್ಟುನಿಟ್ಟಿನ ನಿರ್ಬಂಧ ವಿಧಿಸಿರುವುದರಿಂದ ಜನರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.

ಚೀನಾದ ಎಲ್ಲಾ ಪ್ರಮುಖ ನಗರಗಳಲ್ಲಿ ಕೋವಿಡ್ ನಿರ್ಬಂಧಗಳನ್ನು ಜಾರಿಗೊಳಿಸಲಾಗುತ್ತಿದೆ. 2.1 ಮಿಲಿಯನ್ ಜನಸಂಖ್ಯೆ ಹೊಂದಿರುವ ಚೀನಾದ ರಾಜಧಾನಿ ಬೀಜಿಂಗ್‌ನಲ್ಲಿ 70 ಕೋವಿಡ್ ಪಾಸಿಟಿವ್ ಪ್ರಕರಣಗಳು ಬೆಳಕಿಗೆ ಬಂದಿವೆ.

ವೈರಸ್ ಹರಡುವುದನ್ನು ತಡೆಯಲು ಕಟ್ಟುನಿಟ್ಟಿನ ನಿರ್ಬಂಧಗಳು ಜಾರಿಯಲ್ಲಿವೆ. ಕೋವಿಡ್ ನಿರ್ಬಂಧಗಳ ಅನುಷ್ಠಾನದ ಹಿನ್ನೆಲೆಯಲ್ಲಿ ಬೀಜಿಂಗ್ ನಿವಾಸಿಗಳು ನೂಡಲ್ಸ್, ತರಕಾರಿಗಳು ಮತ್ತು ಅಗತ್ಯ ವಸ್ತುಗಳ ಖರೀದಿಗಾಗಿ ಮಾರುಕಟ್ಟೆಗಳಿಗೆ ಧಾವಿಸುತ್ತಿದ್ದಾರೆ. ಜನರ ಬೇಡಿಕೆಗೆ ಅನುಗುಣವಾಗಿ ಸರಕುಗಳನ್ನು ಪೂರೈಸುವುದಾಗಿ ಸರ್ಕಾರ ಸ್ಪಷ್ಟಪಡಿಸಿದೆ.

ಚೀನಾದ ರಾಜಧಾನಿ ಬೀಜಿಂಗ್‌ನಲ್ಲಿ ಸೆಲೆಬ್ರಿಟಿಗಳ ನೆಲೆಯಾಗಿರುವ ಚಾಯಾಂಗ್ ಪ್ರದೇಶದಲ್ಲಿ ಹತ್ತಾರು ಕರೋನಾ ಪ್ರಕರಣಗಳು ಬೆಳಕಿಗೆ ಬಂದ ನಂತರ ಸರ್ಕಾರವು ಹೆಚ್ಚಿನ ಎಚ್ಚರಿಕೆಯನ್ನು ನೀಡಿದೆ. ಸೋಮವಾರದಿಂದ ಮೂರು ದಿನಗಳ ಕಾಲ ಈ ಪ್ರದೇಶದಲ್ಲಿ 35 ಲಕ್ಷ ಜನರಿಗೆ ಮೂರು ಹಂತಗಳಲ್ಲಿ ರೋಗನಿರ್ಣಯ ಪರೀಕ್ಷೆಗಳನ್ನು ಪ್ರಾರಂಭಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!