ಶ್ರೀಲಂಕಾದಲ್ಲಿ ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ 56,000 ಮಕ್ಕಳು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶ್ರೀಲಂಕಾದ ಮಕ್ಕಳಲ್ಲಿ ಅಪೌಷ್ಟಿಕತೆಯ ಪ್ರಮಾಣ ಹೆಚ್ಚುತ್ತಿದ್ದು, ಕನಿಷ್ಠ 56,000 ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಎಂದು ಯುಎನ್ ವಿಶ್ವ ಆಹಾರ ಕಾರ್ಯಕ್ರಮ ಹೇಳಿದೆ.
ಶ್ರೀಲಂಕಾದಲ್ಲಿ ಉಂಟಾಗಿರುವ ಹಣಕಾಸಿನ ಕೊರತೆ ಮಕ್ಕಳಲ್ಲಿ ಅಪೌಷ್ಟಿಕತೆಗೆ ಮೊದಲ ಕಾರಣವಾಗಿದೆ. ಈ ಗಂಭೀರ ಸಮಸ್ಯೆಯನ್ನು ಪರಿಹರಿಸಲು ಆಹಾರ ಭದ್ರತೆಗೆ ತುರ್ತು ಕ್ರಮ ಕೈಗೊಳ್ಳಬೇಕಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಶ್ರೀಲಂಕಾ ಕೆಟ್ಟ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಆರ್ಥಿಕ ಬಿಕ್ಕಟ್ಟು ನೇರವಾಗಿ ಮಕ್ಕಳ ಮೇಲೆ ಪರಿಣಾಮ ಬೀರಿದೆ. ಅಪೌಷ್ಟಿಕತೆಯ ಪ್ರಮಾಣ ಶೇ.1 ರಿಂದ 1.4ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯದ ಕುಟುಂಬ ಆರೋಗ್ಯ ಬ್ಯೂರೋದ ನಿದೇಶಕಿ ಡಾ. ಚಿತ್ರಮಾಲಿ ಡಿ ಸಿಲ್ವಾ ತಿಳಿಸಿದ್ದಾರೆ.

22 ಮಿಲಿಯನ್ ಜನರಿರುವ ಶ್ರೀಲಂಕಾದಲ್ಲಿ ಈ ವರ್ಷದ ಆರಂಭದಲ್ಲಿ ವಿದೇಶಿ ವಿನಿಮಯದ ಕೊರತೆ ಉಂಟಾಗಿತ್ತು. ಇದರಿಂದಾಗಿ ಆರ್ಥಿಕ ಹಾಗೂ ರಾಜಕೀಯ ಪ್ರಕ್ಷುಬ್ಧತೆ ಹೆಚ್ಚಾಗಿತ್ತು. ಹಾಗಾಗಿ ಅಗತ್ಯ ವಸ್ತುಗಳ ಕೊರತೆಯಾಗಿತ್ತು ಎನ್ನಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!