ಕಾಸರಗೋಡು ಜಿಲ್ಲೆಯಲ್ಲಿ ಶುಕ್ರವಾರ 563 ಮಂದಿಗೆ ಕೊರೋನಾ

ಹೊಸದಿಗಂತ ವರದಿ,ಕಾಸರಗೋಡು:

ಜಿಲ್ಲೆಯಲ್ಲಿ ಶುಕ್ರವಾರ 563 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 503 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಜಿಲ್ಲೆಯಲ್ಲಿ ಇದೇ ದಿನ 108 ಮಂದಿ ಗುಣಮುಖರಾದರು. ಅಲ್ಲದೆ ಕೊರೋನಾ ಸಂಬಂಧ ಜಿಲ್ಲೆಯಲ್ಲಿ ಹೊಸದಾಗಿ ಇಬ್ಬರು ಸಾವಿಗೀಡಾದರು.
ಕೇರಳದಲ್ಲಿ 41,668 ಹೊಸ ಪ್ರಕರಣ
ಕೇರಳದಲ್ಲಿ ಶುಕ್ರವಾರ ಹೊಸದಾಗಿ 41,668 ಜನರಲ್ಲಿ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 36,693 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ರಾಜ್ಯದಲ್ಲಿ ಒಂದೇ ದಿನ 17,053 ಜನರು ಗುಣಮುಖರಾಗಿದ್ದಾರೆ. ಈ ಮಧ್ಯೆ ಕೇರಳದಲ್ಲಿ 33 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಶುಕ್ರವಾರ ಶೇಕಡಾ 37.41 ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!