ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಇಂದು ಹೊಸದಾಗಿ 58 ಜನರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ . ಸೋಂಕಿನಿಂದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ.
ಈ ಬಗ್ಗೆ ಆರೋಗ್ಯ ಇಲಾಖೆಯಿಂದ ಕೋವಿಡ್ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಆರ್ ಟಿ ಪಿ ಸಿ ಆರ್ ಮೂಲಕ 354, ರಾಟ್ ಮೂಲಕ 66 ಸೇರಿದಂತೆ 420 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 58 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ ಎಂದಿದೆ.
ಇಂದು 53 ಸೋಂಕಿತರು ಗುಣಮುಖರಾಗಿದ್ದಾರೆ. ಹೀಗಾಗಿ ಸಕ್ರೀಯ ಪ್ರಕರಣಗಳ ಸಂಖ್ಯೆ 238ಕ್ಕೆ ತಲುಪಿದೆ. ಹೋಂ ಐಸೋಲೇಷನ್ ನಲ್ಲಿ 225 ಸೋಂಕಿತರಿದ್ದರೇ, 6 ಮಂದಿ ಖಾಸಗಿ, 6 ಮಂದಿ ಸರ್ಕಾರಿ ಆಸ್ಪತ್ರೆಯಲ್ಲಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದೆ.