ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಾಲೆಯಲ್ಲಿ ಕೊಟ್ಟ ಮಾತ್ರೆಯನ್ನು ನುಂಗಿದ ನಂತರ 59 ವಿದ್ಯಾರ್ಥಿಗಳಿಗೆ ಏಕಾಏಕಿ ಹೊಟ್ಟೆನೋವು ಕಾಣಿಸಿಕೊಂಡಿದೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಳಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಮಾತ್ರೆ ತಿಂದು ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದಾರೆ.
ಒಟ್ಟಾರೆ ಇನ್ನೂರು ಮಕ್ಕಳಿಗೆ ಮಾತ್ರೆ ನೀಡಲಾಗಿದೆ. ಆದರೆ ಇರಲ್ಲಿ 59 ವಿದ್ಯಾರ್ಥಿಗಳಿಗೆ ಹೊಟ್ಟೆನೋವು ಕಾಣಿಸಿದೆ. ಸದ್ಯ ಆಸ್ಪತ್ರೆಗೆ ಮಕ್ಕಳನ್ನು ದಾಖಲಿಸಲಾಗಿದ್ದು, ಎಲ್ಲರ ಆರೋಗ್ಯ ಸ್ಥಿತಿ ಸುಧಾರಿಸಿದೆ.
ಈ ಅವಘಡಕ್ಕೆ ಕಾರಣ ಏನು ಎಂದು ಪತ್ತೆಹಚ್ಚಲಾಗುತ್ತಿದೆ.
ಶಾಲೆಯಲ್ಲಿ ಕೊಟ್ಟ ಮಾತ್ರೆ ನುಂಗಿ 59 ವಿದ್ಯಾರ್ಥಿಗಳಿಗೆ ಏಕಾಏಕಿ ಹೊಟ್ಟೆನೋವು
ಸಾಂದರ್ಭಿಕ ಚಿತ್ರ



