ಏಳು ವರ್ಷಗಳಲ್ಲಿ ದೇಶಾದ್ಯಂತ 596 ವೈದ್ಯಕೀಯ ಕಾಲೇಜು ಸ್ಥಾಪನೆ

ಹೊಸದಿಗಂತ ಡಿಜಿಟಲ್ ಡೆಸ್ಕ್

ಚಿಕ್ಕಬಳ್ಳಾಪುರ: ಕೇಂದ್ರ ಸರಕಾರವು ದೇಶಾದ್ಯಂತ ಏಳು ವರ್ಷಗಳಲ್ಲಿ 596 ವೈದ್ಯಕೀಯ ಕಾಲೇಜುಗಳನ್ನು ನಿರ್ಮಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಜಿಲ್ಲೆಯ ಮುದ್ದೇನಹಳ್ಳಿಯಲ್ಲಿ ನೂತನ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಶಂಕುಸ್ಥಾಪನೆ ನೆರವೇರಿಸಿದ ಅವರು, ಮೊದಲು ಗ್ರಾಮೀಣ ಪ್ರದೇಶದಲ್ಲಿ ವೈದ್ಯರ ಕೊರತೆಯು ವೈದ್ಯಕೀಯ ನೀತಿಗಳನ್ನು ರೂಪಿಸುವಲ್ಲಿ ದೊಡ್ಡ ಅಡಚಣೆಯಾಗಿತ್ತು. ಏಳು ವರ್ಷಗಳಲ್ಲಿ ನಾವು 596 ವೈದ್ಯಕೀಯ ಕಾಲೇಜುಗಳನ್ನು ಮಾಡಿದ್ದೇವೆ ಎಂದರು.

ದೇಶಾದ್ಯಂತ ನಡೆಯುತ್ತಿರುವ ಆಯುಷ್ಮಾನ್ ಭಾರತ್ ಯೋಜನೆಯನ್ನು ಶ್ಲಾಘಿಸಿದ ಅವರು, ಈ ಯೋಜನೆಯಡಿಯಲ್ಲಿ ಸುಮಾರು 80 ಕೋಟಿ ಬಡವರಿಗೆ ₹ 5 ಲಕ್ಷದವರೆಗಿನ ಉಚಿತ ಚಿಕಿತ್ಸೆಯನ್ನು ಸರಕಾರ ನೀಡಿದೆ ಎಂದು ಅಮಿತ್ ಶಾ ತಿಳಿಸಿದರು.

ಕಾರ್ಯಕ್ರಮದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ಭಾಗವಹಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!