ಹೊಸದಿಗಂತ ಡಿಜಿಟಲ್ ಡೆಸ್ಕ್:
5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆ (Board exam) ವಿಚಾರಕ್ಕೆ ಬಂಧಿಸಿದಂತೆ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಮೇಲ್ಮನವಿ ವಿಚಾರಣೆ ಪೂರ್ಣವಾಗಿದ್ದು, ತೀರ್ಪನ್ನು ಕಾಯ್ದಿರಿಸಿದೆ.
ಶಾಲಾ ಶಿಕ್ಷಣ ಇಲಾಖೆ ನಿಗದಿ ಪಡಿಸಿದ್ದ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು ಕೋರಿ ಖಾಸಗಿ ಶಾಲೆಗಳ ಸಂಘದಿಂದ ಹೈಕೋರ್ಟ್ ಮೆಟ್ಟಿಲೇರಲಾಗಿತ್ತು. ಈ ಅರ್ಜಿ ವಿಚಾರಣೆ ನಡೆಸಿದ್ದ ಏಕ ಸದಸ್ಯ ನ್ಯಾಯಪೀಠವು ಬೋರ್ಡ್ ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ವಿಭಾಗಿಯ ನ್ಯಾಯಪೀಠಕ್ಕೆ ಮೇಲ್ಮನವಿ ಸಲ್ಲಿಸಲಾಗಿತ್ತು. ಈ ಅರ್ಜಿಯನ್ನು ವಿಚಾರಣೆ ನಡೆಸಿದ್ದ ಬೋರ್ಡ್ ಪರೀಕ್ಷೆ ನಡೆಸೋದಕ್ಕೆ ಗ್ರೀನ್ ಸಿಗ್ನಲ್ ನೀಡಿತ್ತು.ಆದ್ರೇ ಹೈಕೋರ್ಟ್ ನ್ಯಾಯಪೀಠದ ಆದೇಶವನ್ನು ಪ್ರಶ್ನಿಸಿ ಖಾಸಗಿ ಶಾಲೆಗಳ ಸಂಘದಿಂದ ಸುಪ್ರೀಂ ಕೋರ್ಟ್ ಮೊರೆ ಹೋಗಲಾಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ್ದಂತ ಸುಪ್ರೀಂ ಕೋರ್ಟ್ ನ್ಯಾಯಪೀಠವು ಬೋರ್ಡ್ ಪರೀಕ್ಷೆಗೆ ತಡೆಯಾಜ್ಞೆ ನೀಡಿ ಆದೇಶಿಸಿತ್ತು. ಹೀಗಾಗಿ ಶಾಲಾ ಶಿಕ್ಷಣ ಇಲಾಖೆಯಿಂದ ಬೋರ್ಡ್ ಪರೀಕ್ಷೆಯನ್ನು ಮುಂದೂಡಿ ಆದೇಶ ಕೂಡ ಮಾಡಲಾಗಿತ್ತು.
ಈ ಬೆನ್ನಲ್ಲೇ ಇಂದು ಬೋರ್ಡ್ ಪರೀಕ್ಷೆಗೆ ಅನುಮತಿ ಕೋರಿ ಪೋಷಕರಿಂದ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ಸುಪ್ರೀಂ ಕೋರ್ಟ್ ಮೇಲ್ಮನವಿ ವಿಚಾರಣೆ ಪೂರ್ಣಗೊಳಿಸುವಂತೆ ಸೂಚಿಸಿದ್ದ ಸೂಚನೆಯಂತೆ ವಿಚಾರಣೆಯನ್ನು ಪೂರ್ಣಗೊಳಿಸಿತ್ತು. ರಾಜ್ಯ ಸರ್ಕಾರದ ಮೇಲ್ಮನವಿ ವಿಚಾರಣೆ ಬಾಕಿಯಿರುವ ಕಾರಣ, ತನ್ನ ತೀರ್ಪನ್ನು ಕಾಯ್ದಿರಿಸಿದೆ.
ಹೀಗಾಗಿ ಕೆಲವೇ ದಿನಗಳಲ್ಲಿ 5, 8, 9ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು ಮೇಲ್ಮನವಿ ವಿಚಾರಣೆಯ ತೀರ್ಪು ಪ್ರಕಟಿಸೋ ಸಾಧ್ಯತೆ ಇದೆ.
When board exam will start
Plz give the decision early
Exam date
Board
Please do the exam
Respected sir : iam studying in 9th class
You are stops the exams but we are going to cochings for 10th classes for you make exams and give leave
THANK YOU SIR