ಇಂದು 5, 8, 9ನೇ ತರಗತಿ ಬೋರ್ಡ್​ ಪರೀಕ್ಷೆ ಫಲಿತಾಂಶ, All the best ಮಕ್ಕಳೇ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಇಂದು ಬಹುನಿರೀಕ್ಷಿತ 5, 8, 9ನೇ ಕ್ಲಾಸ್‌ ಬೋರ್ಡ್‌ ಪರೀಕ್ಷೆ ಫಲಿತಾಂಶ ಹೊರಬೀಳಲಿದೆ.

2023-24ನೇ ಸಾಲಿನ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳ ವಿದ್ಯಾರ್ಥಿಗಳ ರಿಸಲ್ಟ್ ಘೋಷಣೆಯಾಗಲಿದ್ದು, ವಿದ್ಯಾರ್ಥಿಗಳ ಕುತೂಹಲಕ್ಕೆ ತೆರೆಬೀಳಲಿದೆ.

ವಿದ್ಯಾರ್ಥಿಗಳಿಗೆ ಕಳೆದ ಮಾರ್ಚ್‌ನಲ್ಲಿ ಮೌಲ್ಯಾಂಕನ ಪರೀಕ್ಷೆ ಮುಗಿದಿತ್ತು. ಯಾವುದೇ ಕಾರಣಕ್ಕೂ ವಿಳಂಬ ಮಾಡದಂತೆ ಸೂಚನೆ ನೀಡಲಾಗಿತ್ತು. ಅದರಂತೆಯೇ ಇಂದು ಶಾಲಾ ಹಂತದಲ್ಲಿ ಫಲಿತಾಂಶ ಪ್ರಕಟಿಸುವಂತೆ ಸೂಚನೆ ನೀಡಲಾಗಿದೆ.

ಫಲಿತಾಂಶ ಏನೇ ಇರಲಿ, ಶ್ರಮ ಮುಖ್ಯ ಮಕ್ಕಳೇ, ಅಂಕಗಳು ಎಷ್ಟೇ ಬಂದರೂ ಧೃತಿಗೆಡದೆ ಇನ್ನಷ್ಟು ಚೆನ್ನಾಗಿ ಅಭ್ಯಾಸ ಮಾಡಿ ಮುಂದಿನ ಪರೀಕ್ಷೆಯಲ್ಲಿ ಸಾಧಿಸಿ ತೋರಿಸಿ, ಆಲ್‌ ದಿ ಬೆಸ್ಟ್‌ ಮಕ್ಕಳೇ..

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!