ಇಂದಿನಿಂದ 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ಆರಂಭ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇದೇ ಮೊದಲ ಬಾರಿಗೆ ಐದನೇ ಹಾಗೂ ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಇಂದಿನಿಂದ ಬೋರ್ಡ್ ಪರೀಕ್ಷೆಗಳು ಆರಂಭವಾಗಿವೆ.

ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಖಾಸಗಿ ಶಾಲೆಗಳ ಐದನೇ, ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ.

ಪರೀಕ್ಷೆಗೆ ಎಲ್ಲೆಡೆ ಸಕಲ ಸಿದ್ಧತೆ ನಡೆದಿದ್ದು, ಐದನೇ ತರಗತಿ ಮಕ್ಕಳಿಗೆ ಇಂದಿನಿಂದ ಮಾರ್ಚ್ ೩೦ರವರೆಗೆ ಪರೀಕ್ಷೆ ನಡೆಯಲಿದೆ ಹಾಗೂ ಎಂಟನೇ ತರಗತಿ ಮಕ್ಕಳಿಗೆ ಏಪ್ರಿಲ್ ೧ರವರೆಗೆ ಪರೀಕ್ಷೆ ನಡೆಯಲಿದೆ.
ಪರೀಕ್ಷೆ ಸಂಬಂಧ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ನಡೆಯಲಿದ್ದು, ಗೊಂದಲದ ನಡುವೆಯೂ ಪರೀಕ್ಷೆ ನಡೆಸಲು ಇಲಾಖೆ ಮುಂದಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!