Thursday, August 11, 2022

Latest Posts

ಕೋವಿಡ್: ಭಾರತ-ಇಂಗ್ಲೆಂಡ್ 5ನೇ ಟೆಸ್ಟ್ ಪಂದ್ಯ ರದ್ದು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆಮಾಸ್ಕ್ ಧರಿಸಿಸಾಮಾಜಿಕ ಅಂತರ ಕಾಯ್ದುಕೊಳ್ಳಿಕೈಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿನೀವೂ ಸುರಕ್ಷಿತರಾಗಿರಿನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್ಲೈನ್ ಡೆಸ್ಕ್:

ಭಾರತ ತಂಡದ ಕ್ರಿಕೆಟ್ ಆಟಗಾರರಿಗೆ  ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆ ಭಾರತ-ಇಂಗ್ಲೆಂಡ್ ನಡುವಿನ 5ನೇ ಟೆಸ್ಟ್ ಪಂದ್ಯವನ್ನು ಬಿಸಿಸಿಐ ರದ್ದುಗೊಳಿಸಿದೆ.

ಆಟಗಾರರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಬಿಸಿಸಿಐ ಟೀಂ ಇಂಡಿಯಾ ಹಾಗೂ ಇಂಗ್ಲೆಂಡ್ ನಡುವಣ ನಡೆಯಬೇಕಿದ್ದ ಕೊನೆಯ ಟೆಸ್ಟ್ ಪಂದ್ಯವನ್ನು ರದ್ದುಗೊಳಿಸಲು ನಿರ್ಧಾರ ಕೈಗೊಂಡಿದೆ. ಸರಣಿಯಲ್ಲಿ ಟೀಂ ಇಂಡಿಯಾ 2-1 ಮುನ್ನಡೆ ಕಾಯ್ದುಕೊಂಡಿದೆ.

4ನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನ ಭಾರತ ತಂಡದ ಕೋಚ್ ರವಿಶಾಸ್ತ್ರಿಗೆ ಕೊರೊನಾ ಪಾಸಿಟಿವ್ ವರದಿಯಾಗಿತ್ತು. ಬಳಿಕ ಅವರ ಸಂಪರ್ಕದಲ್ಲಿದ್ದ ಮೂವರು ಸಹಾಯಕ ಸಿಬ್ಬಂದಿಗಳಾದ ಬೌಲಿಂಗ್ ಕೋಚ್ ಭರತ್ ಅರುಣ್, ಫೀಲ್ಡಿಂಗ್ ಕೋಚ್ ಆರ್.ಶ್ರೀಧರ್ ಮತ್ತು ಫಿಸಿಯೋ ನಿತೀನ್ ಪಟೇಲ್ ಅವರನ್ನು ಕ್ವಾರಂಟೈನ್‍ಗೆ ಒಳಪಡಿಸಲಾಗಿತ್ತು.

ನಿನ್ನೇ ಮತ್ತೋರ್ವ ಸಹಾಯಕ ಸಿಬ್ಬಂದಿಗೆ ಸೋಂಕು ತಗುಲಿರುವುದು ದೃಢವಾದ ಬೆನ್ನಲ್ಲೇ ಎಲ್ಲಾ ಆಟಗಾರರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿತ್ತು. ಆಟಗಾರರ ರಿಪೋರ್ಟ್  ನೆಗೆಟಿವ್ ಬಂದಿತ್ತು. ಆದರೂ ಕೂಡ ಕೋವಿಡ್ ಹರಡುವ ಹಿನ್ನೆಲೆ ಪಂದ್ಯ ರದ್ದುಗೊಳಿಸಲಾಯಿತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss