‘ನಡೆದಾಡುವ ದೇವರು’ ಡಾ.ಶಿವಕುಮಾರ ಶ್ರೀಗಳ 5ನೇ ವರ್ಷದ ಪುಣ್ಯಸ್ಮರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶ್ರೀ ಸಿದ್ಧಗಂಗಾ ಮಠದ ಲಿಂ.ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ 5 ನೇ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮ ನಡೆಯಲಿದೆ.

ಶ್ರೀಗಳ ಪುಣ್ಯ ಸಂಸ್ಮರಣೋತ್ಸವದ ಅಂಗವಾಗಿ ಬೆಳಿಗ್ಗೆ 5.30ರಿಂದ ರಾಜೋಪಚಾರದ ಮಹಾರುದ್ರಾಭಿಷೇಕದಲ್ಲಿ ಶ್ರೀಗಳ ಗದ್ದುಗೆಗೆ ವಿಶೇಷ ಪುಷ್ಪವೃಷ್ಟಿ ನಡೆಯಿತು. ಬಿಲ್ವಾರ್ಚನೆ ಸೇರಿದಂತೆ ಪೂಜಾ ಕೈಂಕರ್ಯಗಳು ಮಠಾಧ್ಯಕ್ಷ ಸಿದ್ದಲಿಂಗ ಶ್ರೀಗಳ ನೇತೃತ್ವದಲ್ಲಿ ಹರಗರು ಚರಮೂರ್ತಿಗಳ ಸಮ್ಮುಖದಲ್ಲಿ ನಡೆಯಲಿದೆ.

ಪವಿತ್ರ ಸ್ಮರಣೆಯ ದೇಗುಲಕ್ಕೆ ಭೇಟಿ ನೀಡುವ ಭಕ್ತರಿಗೆ ಮಠದ ಆಡಳಿತ ಸಮಿತಿಯು ಸೂಕ್ತ ವ್ಯವಸ್ಥೆಯನ್ನು ಮಾಡಿದೆ. ಎಲ್ಲೆಂದರಲ್ಲಿ ಜನಸಂದಣಿ ಬಾರದಂತೆ ತಡೆಯಲು ಸುತ್ತಲೂ ಬ್ಯಾರಿಕೇಡ್ ಗಳನ್ನು ಹಾಕಲಾಗಿದೆ.

ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಶ್ರೀಗಳ ಪುಣ್ಯ ಸಂಸ್ಮರಣೋತ್ಸವ ವೇದಿಕೆ ಕಾರ್ಯಕ್ರಮದಲ್ಲಿ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ. ಬೆಳಗ್ಗೆ 11ಕ್ಕೆ ಗದಗದ ಜಗದ್ಗುರು ತೋಂಟದಾರ್ಯ ಸಂಸ್ಥಾನಮಠದ ಅಧ್ಯಕ್ಷ ಡಾ.ಶ್ರೀ ತೋಂಟದ ಸಿದ್ದರಾಮ ಸ್ವಾಮೀಜಿ ಸಾನ್ನಿಧ್ಯದಲ್ಲಿ ಸಂಸ್ಮರಣೋತ್ಸವವನ್ನು ಸಿದ್ದರಾಮಯ್ಯ ಉದ್ಘಾಟಿಸುವರು. ಯಡಿಯೂರಪ್ಪ ಅಧ್ಯಕ್ಷತೆ ವಹಿಸಲಿದ್ದು, ಮಠಾಧ್ಯಕ್ಷ ಸಿದ್ದಲಿಂಗ ಶ್ರೀಗಳು ನೇತೃತ್ವವಹಿಸುವರು. ಕಿರಿಯ ಶ್ರೀಗಳಾದ ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿ ದಿವ್ಯ ಉಪಸ್ಥಿತಿವಹಿಸುವರು. ಕಾರ್ಯಕ್ರಮದ ಬಳಿಕ ಶ್ರೀಮಠದ ಶಾಲಾ-ಕಾಲೇಜು ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!