ಆಫ್ಘನ್‌ನಲ್ಲಿ ಬೆಳ್ಳಂಬೆಳಗ್ಗೆ ಮತ್ತೊಂದು ಪ್ರಬಲ ಭೂಕಂಪ, ನೂರಾರು ಮನೆಗಳು ನೆಲಸಮ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಈಗಾಗಲೇ ಸರಣಿ ಭೂಕಂಪಗಳಿಂದ ಜರ್ಜರಿತವಾಗಿರುವ ಆಫ್ಘನಿಸ್ತಾನದಲ್ಲಿ ಮತ್ತೊಮ್ಮೆ ಭೂಮಿ ಕಂಪಿಸಿದೆ, ಇಂದು ಬೆಳ್ಳಂಬೆಳಗ್ಗೆ 6.1ತೀವ್ರತೆಯ ಪ್ರಬಲ ಭೂಕಂಪ ಉಂಟಾಗಿದ್ದು, ಪ್ರಾಣಹಾನಿ ಬಗ್ಗೆ ಪ್ರಸ್ತುತ ಯಾವುದೇ ವರದಿಗಳಿಲ್ಲ.

ಇಂದು ಬೆಳಗ್ಗೆ 06:11ಕ್ಕೆ ಹೆರಾತ್ ರಾಜಧಾನಿಯಿಂದ ಸುಮಾರು 28 ಕಿಲೋಮೀಟರ್ ದೂರದಲ್ಲಿ ಭೂಕಂಪ ಸಂಭವಿಸಿದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ತಿಳಿಸಿದೆ.

ಹೊಸದಾಗಿ ಸಂಭವಿಸಿದ ಭೂಕಂಪನದಿಂದಾಗಿ 465 ಮನೆಗಳು ಸಂಪೂರ್ಣ ನೆಲಸಮವಾಗಿದ್ದು, 135ಕ್ಕೂ ಹೆಚ್ಚು ಮನೆಗಳು ಭಾಗಶಃ ಕುಸಿದಿವೆ. ಸರಣಿ ಭೂಕಂಪಗಳಿಂದ ದೂರವಾಣಿ, ವಿದ್ಯುತ್‌ ಸಂಪರ್ಕ ಕಡಿತಗೊಂಡಿದ್ದರಿಂದ ರಕ್ಷಣಾ ಕಾರ್ಯದಲ್ಲಿ ಅಡಚಣೆಯುಂಟಾಗಿದೆ. ಸರಣಿ ಭೂಕಂಪಗಳಲ್ಲಿ ಸತ್ತವರ ಸಂಖ್ಯೆ ನಾಲ್ಕು ಸಾವಿರ ಗಡಿ ದಾಟಿದೆ. ಇನ್ನೂ ರಕ್ಷಣಾ ಕಾರ್ಯಚರಣೆ ನಡೆಯುತ್ತಿದ್ದು, ಅವಶೇಷಗಳಡಿ ಮೃತದೇಹಗಳು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!