ಆಸ್ಟ್ರೇಲಿಯಾದ ವನೌಟು ದ್ವೀಪದಲ್ಲಿ ಪ್ರಬಲ ಭೂಕಂಪ: 6.7 ತೀವ್ರತೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಆಸ್ಟ್ರೇಲಿಯಾದ ವನೌಟು ದ್ವೀಪದಲ್ಲಿ ಭೂಮಿ ಕಂಪಿಸಿದ್ದು, ಕಂಪನದ ತೀವ್ರತೆ ರಿಕ್ಟರ್‌ ಮಾಪಕದಲ್ಲಿ 6.7 ದಾಖಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಆಸ್ಟ್ರೇಲಿಯಾ ಸರ್ಕಾರದ ಭೂವಿಜ್ಞಾನ ಇಲಾಖೆ, ಸ್ತಳೀಯ ಕಾಲಮಾನದ ಪ್ರಕಾರ ಇಂದು ಬೆಳಗ್ಗೆ 10:17ಕ್ಕೆ ಈ ಘಟನೆ ಸಂಭವಿಸಿದೆ ಎಂದು ತಿಳಿಸಿದೆ.

ಕಂಪನ ಬಿಂದುವನ್ನು ಭೂಮಿಯ ಮೇಲ್ಮೆಯಿಂದ 70 ಕಿ.ಮೀ. ಆಳದಲ್ಲಿ ಗುರುತಿಸಲಾಗಿದೆ. ಘಟನೆಯಲ್ಲಿ ಯಾವುದೇ ಸಾವುನೋವು, ಆಸ್ತಿಪಾಸ್ತಿಗೆ ಹಾನಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!