ಹೊಸದಿಗಂತ ವರದಿ,ಮಡಿಕೇರಿ:
ವಿದ್ಯುತ್ ತಂತಿ ತುಂಡಾಗಿ ಬಿದ್ದು ವಿದ್ಯುತ್ ಹರಿದು 6 ಜಾನುವಾರು (ಹಸು ಕರುಗಳು )ಬಲಿ ಯಾಗಿರುವ ಘಟನೆ ಪೊನ್ನಂಪೇಟೆ ತಾಲೂಕಿನ ತೆರಾಲು ಗ್ರಾಮದಲ್ಲಿ ನಡೆದಿದೆ.
ತೆರಾಲು ಗ್ರಾಮದ ರೈತ ಬೊಜ್ಜoಗಡ ನಟರಾಜ್ (ನಂದ) ಅವರಿಗೆ ಸೇರಿದ ಜಾನುವಾರುಗಳು ಕೊಟ್ಟಿಗೆಗೆ ಬರುತ್ತಿದ್ದ ವೇಳೆ 11 ಕೆವಿ ವಿದ್ಯುತ್ ತಂತಿ ತುಂಡಾಗಿ ಬಿದ್ದು ಈ ದುರ್ಘಟನೆ ನಡೆದಿರುವುದಾಗಿ ಹೇಳಲಾಗಿದೆ.