ಬಿಜೆಪಿಗೆ ಅಡ್ಡ ಮತದಾನ ಮಾಡಿದ 6 ಕಾಂಗ್ರೆಸ್‌ ಶಾಸಕರು ಅನರ್ಹ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಿಮಾಚಲ ಪ್ರದೇಶದ ಅಸಮಾಧಾನ ಮತ್ತು ರಾಜಕೀಯ ಬಿಕ್ಕಟ್ಟಿಗೆ ಕಾಂಗ್ರೆಸ್ ನಾಯಕರು ನಿರ್ಣಾಯಕ ತಿರುವು ನೀಡಿದ್ದಾರೆ. ರಾಜ್ಯಸಭಾ ಚುನಾವಣೆಯಲ್ಲಿ ಆರು ಕಾಂಗ್ರೆಸ್ ಶಾಸಕರು ಬಿಜೆಪಿ ವಿರುದ್ಧ ಮತ ಚಲಾಯಿಸಿದ್ದರು. ಇದೀಗ ಹಿಮಾಚಲ ಪ್ರದೇಶದ ಸ್ಪೀಕರ್ ಆರು ಕಾಂಗ್ರೆಸ್ ಶಾಸಕರನ್ನು ಅನರ್ಹಗೊಳಿಸಿ ಆದೇಶ ಹೊರಡಿಸಿದ್ದಾರೆ.

ಹಿಮಾಚಲ ಪ್ರದೇಶ ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ ಅವರು ಪಕ್ಷಾಂತರ ವಿರೋಧಿ ಕಾನೂನಿನಡಿ ಕ್ರಮ ಕೈಗೊಂಡಿದ್ದಾರೆ. ಅಗತ್ಯವಿದ್ದರೆ ಅನರ್ಹ ಶಾಸಕರು ನ್ಯಾಯಾಲಯದ ಮೊರೆ ಹೋಗಲಿ ಎಂದು ಸ್ಪಷ್ಟಪಡಿಸಿದರು.

ರಾಜ್ಯಸಭಾ ಚುನಾವಣೆಯಲ್ಲಿ ಶಾಸಕರು ಯಾರಿಗಾದರೂ ಮತ ಹಾಕಬಹುದು ಎಂದು ಹಿಂದಿನ ನ್ಯಾಯಾಲಯ ಹೇಳಿದೆ. ಇದರ ಮೇಲೆ ಪಕ್ಷದ ವಿಪ್ ಯಾವುದೇ ಪ್ರಭಾವ ಬೀರುವುದಿಲ್ಲ. ಸ್ಪೀಕರ್ ಆದೇಶದ ನಂತರ ಆರು ಮಂದಿ ಕಾಂಗ್ರೆಸ್ ಸದಸ್ಯರು ನ್ಯಾಯಾಲಯದ ಮೊರೆ ಹೋಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!