Wednesday, February 28, 2024

ಕ್ಯಾಂಡಲ್ ಫ್ಯಾಕ್ಟರಿಯಲ್ಲಿ ಅಗ್ನಿ ದುರಂತ: 6 ಮಂದಿ ಸಾವು, 8 ಜನರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕ್ಯಾಂಡಲ್‌ ತಯಾರಿಕಾ ಘಟಕದಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ 6 ಮಂದಿ ಮೃತಪಟ್ಟಿದ್ದು, 8 ಜನರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಪಿಂಪ್ರಿ ಚಿಂಚವಾಡಾ ಪ್ರದೇಶದಲ್ಲಿ ಶುಕ್ರವಾರ ಸಂಜೆ ನಡೆದಿದೆ.

ತಲವಾಡೆಯಲ್ಲಿರುವ ಕಾರ್ಖಾನೆಯಲ್ಲಿ ಹುಟ್ಟುಹಬ್ಬದ ಆಚರಣೆಗಳಿಗೆ ಬಳಸಲಾಗುವ ವಿಶೇಷ ಮೇಣದಬತ್ತಿಗಳನ್ನು ತಯಾರಿಸಲಾಗುತ್ತದೆ. ಈ ಕಾರ್ಖಾನೆಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಆರು ಮಂದಿ ಬಲಿಯಾಗಿದ್ದಾರೆ. ಘಟನೆಯಲ್ಲಿ 8 ಜನರು ಗಾಯಗೊಂಡಿದ್ದಾರೆ.

ವಿಷಯ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿ ಯಶಸ್ವಿಯಾಗಿದ್ದಾರೆ. ಆದರೆ ಈ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ಪಿಂಪ್ರಿ-ಚಿಂಚ್‌ವಾಡ್‌ ಪುರಸಭೆಯ ಆಯುಕ್ತ ಶೇಖರ್‌ ಸಿಂಗ್ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!