ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವ್ಯಾನ್ ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ ಆರು ಜನ ಸಾವು ಮತ್ತು ಐದು ಮಂದಿ ಗಾಯಗೊಂಡಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ.
ಬಟ್ಟಗ್ರಾಮ್‌ನ ಥಾಕೋಟ್ ಪ್ರದೇಶದಿಂದ ಪಾಕಿಸ್ತಾನದ ಮನ್ಸೆಹ್ರಾದ ಹಜಾರಾ ಮೋಟರ್‌ವೇಗೆ ಸಂಪರ್ಕಿಸುವ ಮಾರ್ಗದಲ್ಲಿ ಈ ದುರಂತ ಸಂಭವಿಸಿದೆ ಎಂದು
ಪಾರುಗಾಣಿಕಾ 1122 ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಮಾಧ್ಯಮದಲ್ಲಿ ವರದಿಯಾಗಿದೆ.
ಮನ್ಸೆಹ್ರಾದ ಹತಿಮೆರಾ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ.
ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ರಕ್ಷಣಾ ತಂಡ ಧಾವಿಸಿ ಮೃತ ದೇಹಗಳನ್ನು ಹೊರತೆಗೆದಿದ್ದಾರೆ ಮತ್ತು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.